ಮಂಡ್ಯ

ದ್ವಿ ಭಾಷ ನೀತಿ ಅನುಷ್ಠಾನದಿಂದ ಕನ್ನಡ ಅಭಿವೃದ್ಧಿ : ಪ್ರೊ.ಶ್ರೀದೇವಿ

ಮಂಡ್ಯ : ಶಿಕ್ಷಣದಲ್ಲಿ ದ್ವಿ ಭಾಷಾ ನೀತಿಯನ್ನ ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ, ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿಶ್ರಾಂತ ಆಂಗ್ಲಬಾಷಾ ಪ್ರಾಧ್ಯಾಪಕಿ ಶ್ರೀದೇವಿ ಹೇಳಿದರು.

ನಗರದ ಸ್ವರ್ಣಸಂದ್ರದ ಎಇಟಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭೂಮಿ ಬೆಳಗು ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ‘ದ್ವಿಭಾಷಾ ನೀತಿಯ ಅನಿವಾರ್ಯತೆ’ ಕುರಿತ ವಿಚಾರ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರೂ ಶಿಕ್ಷಣದಲ್ಲಿ ಕನ್ನಡವನ್ನು ಕಲಿಯಬೇಕೆಂದು ಕಡ್ಡಾಯಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ತ್ರಿಭಾಷಾ ನೀತಿಯಿಂದ ಮಕ್ಕಳಿಗೆ ಮಾನಸಿಕ ಒತ್ತಡ ಉಂಟಾಗುತ್ತಿದ್ದು, ದ್ವಿ ಭಾಷಾ ನೀತಿಯು ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ಉಪಯುಕ್ತವಾಗುತ್ತದೆ. ಇದರಿಂದ ಕನ್ನಡ ಭಾಷೆಯ ಬಳಕೆ ಮತ್ತೆ ಅಧ್ಯಯನವನ್ನು ಪ್ರೋತ್ಸಾಹಿ ಸಿದಂತಾಗುತ್ತದೆ ಎಂದರು.

ಚಿಂತಕ ಡಾ.ಕೆ.ಪಿ.ನಟರಾಜ್ ಅವರು ವಿಚಾರ ಮಂಡನೆ ಮಾಡಿ, ತ್ರಿಭಾಷಾ ಸೂತ್ರ ಗುಲಾಮಗಿರಿಯ ಸಂಕೇತವಾಗಿದ್ದು, ಇದರಿಂದ ಬಿಡುಗಡೆ ಹೊಂದುವ ಮನಸ್ಥಿತಿ ಕನ್ನಡಿಗರಲ್ಲಿ ಕ್ಷೀಣಿಸುತ್ತಿರುವುದು ವಿಷಾದನೀಯ ಸಂಗತಿ. ಕನ್ನಡಿಗರೆಲ್ಲರೂ ಕೂಡ ದ್ವಿಭಾಷಾ ನೀತಿಯ ಪರವಾಗಿರಬೇಕೆಂದರು.

ಎಇಟಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಪ್ರಾಧ್ಯಾಪಕ ಎಚ್.ಪಿ.ಧರ್ಮೇಶ್, ಭೂಮಿ ಬೆಳಗು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಂಗಲ ಎಂ.ಯೋಗೀಶ್, ಸಹಾಯಕ ಪ್ರಾಧ್ಯಾಪಕರುಗಳಾದ ಸುಕೇಶ್, ದಯಾನಂದ್, ಮೋಹನ್‌ದಾಸ್, ವಾಣಿ, ರಕ್ಷಿತಾ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

2 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

2 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

2 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

4 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago