ಮಂಡ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ ಮನಸುಳ್ಳ ನಾಗರಿಕ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು, ಅಪರಾಽಗಳಿಗೆ ಶಿಕ್ಷೆಯಾಗಬೇಕೆಂದು ಘೋಷಣೆ ಕೂಗಿದರು.

ಪ್ರಕರಣಗಳಿಗೆ ಬಗ್ಗೆ ಸಾಕ್ಷ್ಯಾಧಾರದೊಂದಿಗೆ ಮುಂದೆ ಬಂದಿರುವ ದೇವಾಲಯದ ಮಾಜಿ ಉದ್ಯೋಗಿಯ ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ, ಈ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಲಾಢ್ಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಈ ಹಿಂದಿನ ಸರ್ಕಾರಗಳು ಇದರ ವಿಚಾರದಲ್ಲಿ ದಿಟ್ಟ ನಿಲುವು ತಾಳಲು ಹಿಂಜರಿದಿರುವ ಇತಿಹಾಸವನ್ನು ನೆನಪಿಸಿಕೊಂಡು ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಸಾಕ್ಷ್ಯ ಒದಗಿಸಲು ಮುಂದೆ ಬಂದಿರುವ ವ್ಯಕ್ತಿಗೆ ಮತ್ತು ಕೊಲೆಯಾದ ಹೆಣ್ಣು ಮಕ್ಕಳ ಕುಟುಂಬಸ್ಥರಿಗೆ ರಕ್ಷಣೆಯನ್ನು ಒದಗಿಸಬೇಕು. ಈ ಸಾಕ್ಷಿಯು ೧೯೯೫ ರಿಂದ ೨೦೧೪ ರವರೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿದೆ ಎನ್ನಲಾಗುತ್ತಿದೆ. ಇವರ ಸುರಕ್ಷತೆಯನ್ನು ಖಾತರಿಪಡಿಸಲು ೨೦೧೮ರ ಸಾಕ್ಷಿಗಳ ರಕ್ಷಣಾ ಯೋಜನೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಕೆಲವು ದಶಕಗಳಿಂದ ಧರ್ಮಸ್ಥಳದಲ್ಲಿ ಆಗಾಗ್ಗೆ ಹೊರಬಂದಿರುವ ಇಂತಹ ಆರೋಪಗಳ ಬಗ್ಗೆ ನಾಡಿನ ಚಳವಳಿಗಳು ಸುದೀರ್ಘ ಹೋರಾಟಗಳನ್ನು ನಡೆಸಿವೆ. ಆದರೆ ಸುಮಾರು ಮೂರು ದಶಕಗಳ ಹಿಂದೆ ನಡೆದ ಪದ್ಮಲತಾ ಪ್ರಕರಣದಿಂದ ಹಿಡಿದು, ಆನೆ ಮಾವುತನ ಪ್ರಕರಣ, ಸೌಜನ್ಯಾ ಪ್ರಕರಣ ಮುಂತಾದ ಯಾವುದೇ ಘಟನೆಗಳಲ್ಲಿ ಆಡಳಿತದಲ್ಲಿದ್ದ ಸರ್ಕಾರಗಳು ಕ್ರಮ ತೆಗೆದುಕೊಳ್ಳದಿರುವುದಕ್ಕೆ ದೊಡ್ಡ ದುರಂತ ಸಾವಿಗೆ ಕಾರಣ ಎಂದು ಕಿಡಿಕಾರಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ತೆರಳಿ ಕೆಲ ಹೊತ್ತು ಧರಣಿ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಸಂಘಟನೆಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಬಿ.ಟಿ.ವಿಶ್ವನಾಥ್, ಎಂ.ಸಿದ್ದರಾಜು, ಲತಾ ಶಂಕರ್, ಸೋಮಶೇಖರ್, ಕೆ.ಮಹಮದ್, ಇಂಪನಾ, ಪೂರ್ಣಿಮಾ, ಎಂ.ವಿ.ಕೃಷ್ಣ ಮಳವಳ್ಳಿ, ನಾಗೇಶ್, ಜ್ಯೋತಿ, ಮುತ್ತಮ್ಮ, ಪಂಕಜಾ, ಮಂಜುಳಾ, ಸುಬ್ರಹ್ಮಣ್ಯ, ರೇಣುಕಾ, ನಾಗರತ್ನ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago