ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ ಪರಿಣಿತರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಗಣತಿ 2027 ಹಂತ 1ರ ಕಾರ್ಯಚರಣೆ ಸಂಬಂಧ ನಿಯೋಜನೆಗೊಂಡಿರುವ ತಾಂತ್ರಿಕ ಸಿಬ್ಬಂದಿಗಳಿಗೆ ತರಬೇತಿಯಲ್ಲಿ ಮಾತನಾಡಿದರು.
2011ರ ಜನಗಣತಿಯು ಹಳೆಯ ಮ್ಯಾನುವೆಲ್ ಪದ್ಧತಿಯಲ್ಲಿ ನಡೆದಿತ್ತು. ಆದರೆ, 2027ರ ಜನಗಣತಿಯು ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ನಡೆಯಲಿದೆ. ದತ್ತಾಂಶ ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಲಿದ್ದು, ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿದರು.
2027ರ ಜನಗಣತಿಯು ಸಂಪೂರ್ಣ ಡಿಜಿಟಲ್ ಆಗಿರುವುದರಿಂದ, ಮೊಬೈಲ್ ಆ್ಯಪ್ ಬಳಕೆ, ಡಿಜಿಟಲ್ ದತ್ತಾಂಶ ನಮೂದು ಮತ್ತು ಮನೆ ಪಟ್ಟಿ ನಕ್ಷೆ ತಯಾರು (HLB) ಮಾಡುವ ಬಗ್ಗೆ ತಾಂತ್ರಿಕ ಸಿಬ್ಬಂದಿಗಳು ಹೆಚ್ಚು ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜನಗಣತಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರಾದ ಧನ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಕೇಶವಮೂರ್ತಿ, ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ನಿರ್ದೇಶಕ ಚೇತನ್ ಎಸ್ ಹಾಜರಿದ್ದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…