Mysore
24
overcast clouds

Social Media

ಗುರುವಾರ, 11 ಜೂನ್ 2026
Light
Dark

ವಿಷಾಹಾರ: ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

ಮಂಡ್ಯ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಳವಳ್ಳಿಯ ಖಾಸಗಿ ವಸತಿ ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ವಿಚಾರಿಸಿದರು.

ಇಂದು ನಗರದ ಮಿಮ್ಸ್ ಆಸ್ಪತ್ರೆಗೆ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. ಬಳಿಕ, ವಿದ್ಯಾರ್ಥಿಗಳ ಅರೋಗ್ಯದ ಗಂಭೀರತೆಯ ಸ್ವರೂಪದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಮಿಮ್ಸ್ ನ ನಿರ್ದೇಶಕ ಡಾ. ನರಸಿಂಹ ಮೂರ್ತಿ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!