ಮಂಡ್ಯ

ಯತ್ನಾಳ್‌ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ: ಲಿಂಗಾಯತ ಮಹಸಭಾ ಆಗ್ರಹ

ಮಂಡ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಸಮಾಜದ ಕ್ಷಮೆಯಾಚನೆ ಮಾಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ಆಗ್ರಹಿಸಿದರು.

ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ್ದು, ಎಲ್ಲ ರಾಜಕಾರಣಿಗಳು ಅವರ ಹೆಸರು ಬಳಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ. ಅಂತವರಲ್ಲಿ ಯತ್ನಾಳ್ ಕೂಡ ಒಬ್ಬರಾಗಿದ್ದು, ಅವರ ಹೇಳಿಕೆ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತದೆ ಎಂದು ಕಿಡಿ ಕಾರಿದರು.

ಒಂದು ಸಮುದಾಯದವನ್ನು ಮೆಚ್ಚಿಸಲು ವಿಶ್ವಗುರು ಎಂದು ಖ್ಯಾತಿ ಪಡೆದ ಬಸವಣ್ಣನವರ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಸಮುದಾಯಕ್ಕೆ ಬೇಸರವುಂಟು ಮಾಡಿದ್ದು, ಯತ್ನಾಳ್ ಲಿಂಗಾಯತ ಸಮಾಜದ ಹಾಗೂ ಮನುಕುಲದ ಕ್ಷಮೆಯಾಚಿಸಬೇಕು. ತಮ್ಮ ಅವಿವೇಕತನವನ್ನು ಬಹಿರಂಗವಾಗಿ ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಕೆ.ಆರ್.ಪೇಟೆ ತಾ.ಅಧ್ಯಕ್ಷ ಸುಜೀಂದ್ರಕುಮಾರ್, ಪಾಂಡವಪುರ ತಾ.ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಜಯಣ್ಣ, ಮಂಡ್ಯ ತಾ.ಅಧ್ಯಕ್ಷ ಗುಳ್ಳಪ್ಪ, ಮಹದೇವಸ್ವಾಮಿ, ಹರೀಶ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

5 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago