ಮಂಡ್ಯ

86 ಜೀತ ವಿಮುಕ್ತರಿಗೆ 13 ವಿವಿಧ ಗುರುತಿನ ಚೀಟಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಮದ್ದೂರು ತಾಲ್ಲೂಕಿನಲ್ಲಿ ಜೀತ ವಿಮುಕ್ತ ಕುಟುಂಬದವರಿಗೆ ಗುರುತಿನ ಚೀಟಿ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು‌. ಜೀತ ಪದ್ಧತಿ ಕಾನೂನು ಬಾಹಿರ ಎಂದು ತಿಳಿದಿದ್ದರೂ ಸಹ‌ ಮುಗ್ದ ಜನರು ಜೀತ ಪದ್ಧತಿಗೆ ಬಲಿಯಾಗುತ್ತಾರೆ. ಜೀತ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸರ್ಕಾರ ಹಲವಾರು ಯೋಜನೆಗಳನ್ನು ‌ರೂಪಿಸಿದೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಜೀತ ಪದ್ಧತಿ ಕಾನೂನು‌ ಬಾಹಿರ ಎಂದು ತಿಳಿದಿದ್ದರೂ ಕೆಲವರು ಬಡತನದಿಂದ ಜೀತದಾಳಾಗಿ ಕೆಲಸ ಮಾಡುತ್ತಾರೆ. ಜಿಲ್ಲೆಯಲ್ಲಿ ಒಟ್ಟು 86 ಅವರಲ್ಲಿ ಹೆಣ್ಣು-04. ಗಂಡು-82 ಜನರನ್ನು ಜೀತ ವಿಮುಕ್ತರನ್ನಾಗಿ ಮಾಡಿ‌ ಸಮಾಜದ ಮುಖ್ಯವಾಹಿನಿಗೆ ತರಲು ಜೀತವಿಮುಕ್ತರು ಹಾಗೂ ಅವರ ಅವಲಂಬಿತರ ಬಳಿ ಸರ್ಕಾರಿ ದಾಖಲೆಗಳಿಲ್ಲದಿರುವುದು ತಿಳಿದುಬಂತು. ಎಲ್ಲಾ ಇಲಾಖೆಗಳ ಸೌಲಭ್ಯ ಪಡೆಯಲು ಕೆಲವು ದಾಖಲೆಗಳು ಅಗತ್ಯವಾಗಿ ಬೇಕಿರುವುದರಿಂದ. ಮೊದಲಿಗೆ ಜಿಲ್ಲೆಯ ಎಲ್ಲಾ ಜೀತವಿಮುಕ್ತರಿಗೂ ಸರ್ಕಾರದ ’13’ ದಾಖಲೆಗಳನ್ನು ನೀಡಲಾಗುತ್ತಿದೆ ಇದರೊಂದಿಗೆ ಅವರ ಆರೋಗ್ಯ ತಪಾಸಣೆ ಸಹ ನಡೆಸಲಾಗುತ್ತಿದೆ ಎಂದರು.

ಆಧಾರ್ ಕಾಡ್೯ ಸೇರಿದಂತೆ ವಿವಿಧ ಗುರುತಿನ ಚೀಟಿ ನೀಡಲಾಗುತ್ತಿದ್ದು,ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪಡೆದು ಇನ್ನೂ ಮುಂದೆ ಸ್ವಾವಲಂಭಿಗಳಾಗಿ ಘನತೆಯುಕ್ತ ಜೀವನ ನಡೆಸಬಹುದು ಎಂದರು.

ಮದ್ದೂರು ಶಾಸಕ‌ ಕೆ.ಎಂ.ಉದಯ್ ಅವರು ಮಾತನಾಡಿ ಜೀತ ವಿಮುಕ್ತರಿಗೆ . ಆಧಾರ್ ಕಾರ್ಡ್, ಜನನ-ಮರಣ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ-ಆದಾಯ ಪ್ರಮಾಣ ಪತ್ರ, ಪಡಿತರ ಗುರುತಿನ ಚೀಟಿ, ಚುನಾವಣಾ ಗುರುತಿನ ಚೀಟಿ, ವೈಯಕ್ತಿಕ ಬ್ಯಾಂಕ್ ಉಳಿತಾಯ ಖಾತೆ, ವಿವಿಧ ಯೋಜನೆಗಳಡಿ ಪಿಂಚಣಿ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಆರೋಗ್ಯ ವಿಮೆಗಳು (PMJJBY, PMSBY), ಇ ಶ್ರಮ್ ಗುರುತಿನ ಕಾರ್ಡ್, UDID ಗುರುತಿನ ಚೀಟಿ, ಭಾಗ್ಯಲಕ್ಷ್ಮಿ ಯೋಜನೆ, ಮನರೇಗಾ ಉದ್ಯೋಗ ಚೀಟಿ ನೀಡಲಾಗುತ್ತಿದೆ. ಇದರಿಂದ ಅವರುಗಳು ಸ್ವಾವಲಂಬಿ ಜೀವನ ನಡೆಸಬಹುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಜೀತವಿಮುಕ್ತರ ಬಾಳಿನಲ್ಲಿ ಸಂಜೀವಿನಿಯ ಬೆಳಕು ಅಭಿಯಾನದಡಿ ಜೀತವಿಮುಕ್ತರ ಕುಟುಂಬದ ಅರ್ಹ ಮಹಿಳೆಯರನ್ನು NRLM ಯೋಜನೆಯ ‘ಸಂಜೀವಿನಿ’ ಯಡಿಯಲ್ಲಿ ಸ್ವ-ಸಹಾಯ ಸಂಘಗಳಿಗೆ ಸೇರ್ಪಡೆ ಮಾಡುವ ಕಾರ್ಯವನ್ನು ಮಾಡಲಾಗಿದೆ. ಸಂಜೀವಿನಿಯಡಿ ದೊರೆಯುವ ಅರ್ಹ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಅನುವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. “Rseti’ ವತಿಯಿಂದ ಜೀತವಿಮುಕ್ತರ ಕುಟುಂಬದ ಅರ್ಹ ಯುವಕ, ಯುವತಿಯರಿಗೆ ಇತರೇ ವೃತ್ತಿಕೌಶಲ್ಯ ತರಬೇತಿ ನೀಡಲು ಕ್ರಮವಹಿಸಲಾಗುತ್ತಿದೆ ಎಂದರು.

ಇ-ಸ್ವತ್ತು ಅಭಿಯಾನ- ನನ್ನ ಗುರುತು ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಜೀತವಿಮುಕ್ತರ ಸ್ವಂತ ಸೂರಿಗೆ ದಾಖಲೆ ಒದಗಿಸುವ ಕಾರ್ಯ. ಈಗಾಗಲೇ 49ಕ್ಕೂ ಹೆಚ್ಚು ಇ-ಸ್ವತ್ತುಗಳು, ಅರ್ಹ ವಯಸ್ಸಿನ ಜೀತವಿಮುಕ್ತರ ಕುಟುಂಬದವರಿಗೆ 172 – ಇ-ಶ್ರಮ್‌ ಕಾರ್ಡ್‌ಗಳು, 180 ಕ್ಕೂ ಹೆಚ್ಚು ಸ್ವ-ಸಹಾಯ ನೋಂದಣಿ, 10 ಜಾತಿ ಆದಾಯ ಪ್ರಮಾಣ ಪತ್ರ, 180ಕ್ಕೂ ಹೆಚ್ಚು PMJJBY/PMSBY, UDID ಗುರುತಿನ ಚೀಟಿ, ನರೇಗಾ ಇತ್ಯಾದಿ ಸವಲತ್ತುಗಳನ್ನು ಒದಗಿಸಿ, ಜೀತವಿಮುಕ್ತರ ಸ್ವಾಭಿಮಾನದ ಬದುಕಿನ ಚುಕ್ಕಾಣಿ ಹಿಡಿಯಲು ಜಿಲ್ಲಾ ಪಂಚಾಯತ್ ನೆರವಾಗಿದೆ ಎಂದರು

ಜೀತವಿಮುಕ್ತರ ಕುಟುಂಬಗಳಿಗೆ ಭಾರತಿನಗರ ‘ಗ್ರಾಮ ಪಂಚಾಯತ್ ವತಿಯಿಂದ ಸೋಲಾರ್ ಲೈಟ್ ಮತ್ತು ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮದ್ದೂರು ತಾಲ್ಲೂಕು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

4 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

7 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

7 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

8 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

8 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

8 hours ago