Mysore
24
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ತಹಶೀಲ್ದಾರ್‌ ಹಾಗೂ ಪಂಚಾಯತ್‌ ಕಚೇರಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ: ಜಿಲ್ಲಾಧಿಕಾರಿ ಡಾ ಕುಮಾರ ಇಂದು( ಮೇ.22)  ಮಂಡ್ಯ ತಹಶೀಲ್ದಾರ್ ಕಚೇರಿ  ಹಾಗೂ ತಾಲ್ಲೂಕು ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು‌. ತಾಲ್ಲೂಕು ಕಚೇರಿಯಲ್ಲಿ ಕಳೆದ ಒಂದು ವಾರದಿಂದ ರೈತರಿಗೆ ಸಂಬಂಧಪಟ್ಟಂತೆ ಆಧಾರ್ ಸೀಡಿಂಗ್ ನಡೆಯುತ್ತಿರುವ ಕೆಲಸಗಳನ್ನು ಪರಿಶೀಲಿಸಿದರು.

ಮಳೆ ಹೆಚ್ಚಿನ ಪ್ರಮಾಣದಲ್ಲಿ ಬಂದಿರುವ ಹಿನ್ನೆಲೆಯಲ್ಲಿ ಯಾವುದಾದರೂ ಮನೆ ಹಾನಿ ಅಥವಾ ಬೆಳೆಗಳು ಹಾನಿಯ ಬಗ್ಗೆ ವರದಿ ಸಿದ್ಧ ಪಡಿಸುತ್ತಿರುವ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು.

ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ನೀಡುವ ಬಾಕಿ ಇರುವ ಪ್ರಕರಣಗಳು, ರಸ್ತೆ ಉತ್ತುವರಿ, ತಿದ್ದುಪಡಿ, ಪಡಿತರ ಚೀಟಿ ಕುರಿತು ದೂರು ಬರುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು

ರೈತರು ತಮ್ಮ ಪಹಣಿಗಳಿಗೆ ದಾಖಲೆಗಳಿಗೆ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಆಗಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೂಡ ಈಗಾಗಲೇ ಸುಮಾರು 1 ಲಕ್ಷದ 10 ಸಾವಿರ ಆಧಾರ್ ಸೀಡಿಂಗ್ ನ್ನು ಕಳೆದ ಒಂದು ವಾರದಿಂದ ಮಾಡಲಾಗಿದೆ. ಈ ಬಗ್ಗೆ ಖುದ್ದು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಖಾತೆದಾರ ರೈತರ ಆಧಾರ್ ಸೀಡಿಂಗ್ ಯೋಜನೆಯಡಿ ಜಿಲ್ಲೆಯ 21 ಲಕ್ಷ ಖಾತೆದಾರ ರೈತರ ಪೈಕಿ ಈಗಾಗಲೇ 1.10 ಲಕ್ಷ ರೈತರ ಆಧಾರ್ ಲಿಂಕ್ ಮುಗಿಸಲಾಗಿದ್ದು ಜೂನ್ ಅಂತ್ಯದೊಳಗೆ ಆಧಾರ್ ಸೀಡಿಂಗ್ ಯೋಜನೆ ಪೂರ್ಣಗೊಳಿಸಲಾಗುದು ಎಂದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಎಡಿಎಲ್’ಆರ್ ಮಮತಾ, ಭೂಮಿ ಶಾಖೆ ಸಲಹೆಗಾರ ಲೋಹಿತ್, ಗ್ರಾಮ ಲೆಕ್ಕಾಧಿಕಾರಿ ತೇಜಸ್ ಗೌಡ ಇತರರು ಉಪಸ್ಥಿತರಿದ್ದರು.

Tags:
error: Content is protected !!