ಮಂಡ್ಯ: ಜಿಲ್ಲಾಧಿಕಾರಿ ಡಾ ಕುಮಾರ ಇಂದು( ಮೇ.22) ಮಂಡ್ಯ ತಹಶೀಲ್ದಾರ್ ಕಚೇರಿ ಹಾಗೂ ತಾಲ್ಲೂಕು ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ತಾಲ್ಲೂಕು ಕಚೇರಿಯಲ್ಲಿ ಕಳೆದ ಒಂದು ವಾರದಿಂದ ರೈತರಿಗೆ ಸಂಬಂಧಪಟ್ಟಂತೆ ಆಧಾರ್ ಸೀಡಿಂಗ್ ನಡೆಯುತ್ತಿರುವ ಕೆಲಸಗಳನ್ನು ಪರಿಶೀಲಿಸಿದರು.
ಮಳೆ ಹೆಚ್ಚಿನ ಪ್ರಮಾಣದಲ್ಲಿ ಬಂದಿರುವ ಹಿನ್ನೆಲೆಯಲ್ಲಿ ಯಾವುದಾದರೂ ಮನೆ ಹಾನಿ ಅಥವಾ ಬೆಳೆಗಳು ಹಾನಿಯ ಬಗ್ಗೆ ವರದಿ ಸಿದ್ಧ ಪಡಿಸುತ್ತಿರುವ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು.
ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ನೀಡುವ ಬಾಕಿ ಇರುವ ಪ್ರಕರಣಗಳು, ರಸ್ತೆ ಉತ್ತುವರಿ, ತಿದ್ದುಪಡಿ, ಪಡಿತರ ಚೀಟಿ ಕುರಿತು ದೂರು ಬರುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು
ರೈತರು ತಮ್ಮ ಪಹಣಿಗಳಿಗೆ ದಾಖಲೆಗಳಿಗೆ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಆಗಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೂಡ ಈಗಾಗಲೇ ಸುಮಾರು 1 ಲಕ್ಷದ 10 ಸಾವಿರ ಆಧಾರ್ ಸೀಡಿಂಗ್ ನ್ನು ಕಳೆದ ಒಂದು ವಾರದಿಂದ ಮಾಡಲಾಗಿದೆ. ಈ ಬಗ್ಗೆ ಖುದ್ದು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಖಾತೆದಾರ ರೈತರ ಆಧಾರ್ ಸೀಡಿಂಗ್ ಯೋಜನೆಯಡಿ ಜಿಲ್ಲೆಯ 21 ಲಕ್ಷ ಖಾತೆದಾರ ರೈತರ ಪೈಕಿ ಈಗಾಗಲೇ 1.10 ಲಕ್ಷ ರೈತರ ಆಧಾರ್ ಲಿಂಕ್ ಮುಗಿಸಲಾಗಿದ್ದು ಜೂನ್ ಅಂತ್ಯದೊಳಗೆ ಆಧಾರ್ ಸೀಡಿಂಗ್ ಯೋಜನೆ ಪೂರ್ಣಗೊಳಿಸಲಾಗುದು ಎಂದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಎಡಿಎಲ್’ಆರ್ ಮಮತಾ, ಭೂಮಿ ಶಾಖೆ ಸಲಹೆಗಾರ ಲೋಹಿತ್, ಗ್ರಾಮ ಲೆಕ್ಕಾಧಿಕಾರಿ ತೇಜಸ್ ಗೌಡ ಇತರರು ಉಪಸ್ಥಿತರಿದ್ದರು.
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…