ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನಾ ಜಿಲ್ಲಾಧಿಕಾರಿ ಕುಮಾರ್ ದಿಢೀರ್ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದರು.
ಕಚೇರಿಯ ವಿವಿಧ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಬಳಿಕ ಸಾರ್ವಜನಿಕ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಿ ಅಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮದ್ದೂರು ತಹಶೀಲ್ದಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.





