ಮಂಡ್ಯ: ಜಿಲ್ಲೆಯಲ್ಲಿ ಜೂನ್ 15 ರೊಳಗಾಗಿ ನಿಗದಿಪಡಿಸಿದ 85 ಕರೆಗಳ ಒತ್ತುವರಿಗಳನ್ನು ತೆರವುಗೊಳಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಸಭೆ ನಡೆಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 35 ಕೆರೆ, ಸಣ್ಣ ನೀರಾವರಿ ಇಲಾಖೆಯ 2 ಕೆರೆ, ಹೇಮಾವತಿ ಎಡದಂಡೆ ನಾಲಾ ವಿಭಾಗದ 33ಕೆರೆ, ಕಾವೇರಿ ನೀರಾವರಿ ನಿಗಮ ನಿಯಮಿತದ 15 ಕೆರೆಗಳು ಸೇರಿದಂತೆ ಒಟ್ಟು 85 ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 962 ಕೆರೆಗಳಿವೆ. ಭೂ ದಾಖಲೆಗಳ ಇಲಾಖೆಯ ಸಹಯೋಗದೊಂದಿಗೆ ಕೆರೆಗಳನ್ನು ಅಳತೆ ಮಾಡಲಾಗಿದೆ. ಇದರಲ್ಲಿ 448 ಕೆರೆಗಳಲ್ಲಿ ಒತ್ತುವರಿ ಕಂಡುಬಂದಿದ್ದು, 200 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ 248 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕಿದ್ದು, ಜೂನ್ 15 ರೊಳಗಾಗಿ ನಿಗದಿಪಡಿಸಿರುವ 85 ಕೆರೆಗಳ ಒತ್ತುವರಿಯನ್ನು ತಹಶೀಲ್ದಾರ್, ಪೊಲೀಸ್ ಇಲಾಖೆಯ ಸಹಾಯ ಪಡೆದು ತೆರವುಗೊಳಿಸಿ ವರದಿ ನೀಡಬೇಕು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಹೆಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು, ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿರುವ ಕೆರೆಗಳನ್ನು ಅಳತೆ ಮಾಡಿಸಿ ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಮೇ 13 ರ ಸಂಜೆ 5 ಗಂಟೆಯೊಳಗಾಗಿ ಕಡತ ಸಲ್ಲಿಕೆಯಾಗದಿದ್ದರೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೆರೆಗಳನ್ನು ಸರಿಯಾಗಿ ಸಂರಕ್ಷಣೆ ಮಾಡದಿದ್ದರೆ ಮಳೆ ನೀರನ್ನು ಸಂಗ್ರಹಿಸಲಾಗದೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಕೆರೆಯ ಸುತ್ತ 30 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಡಿ.ಡಿ.ಎಲ್ಆರ್ ಉಮೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…