ಮಂಡ್ಯ

ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದ ಜಿ.ಪಂ ಸಿಇಒ

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು.

ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿ ಮಡಿ ತಯಾರಿಕಾ ಘಟಕದಲ್ಲಿ ಏರ್ಪಡಿಸಲಾಗಿದ್ದ ಯಾಂತ್ರೀಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದ ಅವರು, ಯಾಂತ್ರೀಕೃತ ವಿಧಾನದ ಮೂಲಕ ಮಹಿಳೆಯರು ಕೂಡ ಭತ್ತ ನಾಟಿ ಮಾಡಬಹುದು ಎಂಬ ವಿಶ್ವಾಸ ತುಂಬಲು ಸ್ವತಃ ಅವರೇ ನಾಟಿ ಪ್ರಕ್ರಿಯೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.

ಭತ್ತ ನಾಟಿಗೆ ಯಂತ್ರ ಬಳಸಲು ಮಹಿಳೆಯರಿಗೆ ಸಾಧ್ಯವಿಲ್ಲ. ಅವರಿಂದ ಯಂತ್ರವನ್ನು ನಿರ್ವಹಣೆ ಮಾಡಲು ಅಸಾಧ್ಯ ಎಂಬ ಕಲ್ಪನೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಮಹಿಳೆಯರು ಕೂಡ ಯಂತ್ರದ ಮೂಲಕ ಭತ್ತ ನಾಟಿ ಮಾಡಬಹುದು ಹಾಗೂ ಯಂತ್ರವನ್ನು ನಿರ್ವಹಣೆ ಮಾಡಬಹುದು ಎಂದು ತರಬೇತಿಗೆ ಬಂದಿದ್ದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಭತ್ತ ನಾಟಿಗೆ ಕೃಷಿ ಕೂಲಿಕಾರರು ಸರಿಯಾದ ಸಮಯದಲ್ಲಿ ದೊರೆಯುತ್ತಿಲ್ಲ. ಇದರಿಂದ ಸರಿಯಾದ ಸಮಯದಲ್ಲಿ ನಾಟಿ ಮಾಡಲು ಸಾಧ್ಯವಾಗದೇ ಇಳುವರಿ ಕಡಿಮೆಯಾಗುತ್ತಿದೆ. ಯಾಂತ್ರೀಕೃತ ವಿಧಾನದ ಭತ್ತ ನಾಟಿಯಿಂದ ಭತ್ತ ನಾಟಿಯ ವೆಚ್ಚ ತಗ್ಗಿಸಬಹುದಾಗಿದೆ ಹಾಗೂ ಕಡಿಮೆ ಸಮಯದಲ್ಲಿ ನಾಟಿ ಮಾಡಬಹುದಾಗಿದೆ ಎಂದು ತಿಳಿಸಿದರು.

ಒಂಟಿ ಕಣ್ಣಿನ ಕಬ್ಬಿನ ಸಸಿ ಮಡಿ ತರಬೇತಿ
ಕೃಷಿ ಇಲಾಖೆಯ ಸಮನ್ವಯದೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ನೋಂದಾಯಿತ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಒಂಟಿ ಕಣ್ಣಿನ ಕಬ್ಬಿನ ಸಸಿ ಮಡಿ ತಯಾರಿಸುವುದು ಹಾಗೂ ಯಂತ್ರ ನಾಟಿ ಸಸಿಮಡಿ ತಯಾರಿಸುವ ಕುರಿತಂತೆ ಒಂದು ದಿನದ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಯಾಂತ್ರೀಕೃತ ವಿಧಾನದ ಭತ್ತ ನಾಟಿಗೆ ಸಸಿಮಡಿಗಳನ್ನು ತಯಾರಿಸುವ ವಿಧಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ತರಬೇತಿ ನೀಡಿ, ಅವರಿಂದ ರೈತರಿಗೆ ಉತ್ತಮ ಗುಣಮಟ್ಟದ ಭತ್ತದ ಸಸಿಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ತರಬೇತಿ ಏರ್ಪಡಿಸಲಾಗಿದೆ ಎಂದು ಕೆ.ಆರ್.ನಂದಿನಿ ಹೇಳಿದರು.

ಈ ಸಂದರ್ಭದಲ್ಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸಹಾಯಕ ಕೃಷಿ ನಿರ್ದೇಶಕ ಶ್ರೀಹರ್ಷ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago