ಮಂಡ್ಯ

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯಲಿ ಎಂಬ ಆಸೆ ಡಿಕೆಗೂ ಇದೆ: ಆರ್‌.ಅಶೋಕ್‌

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಬಿಜೆಪಿ ಪಾದಯಾತ್ರೆಯ ನಡುವೆ ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿಂದು (ಆಗಸ್ಟ್‌ 9) ಮಾತನಾಡಿದ ಅವರು, ಮುಡಾ ಹಗರಣದಲ್ಲಿ ʼನಾನು ಕಳ್ಳ ಅಲ್ಲ, ನನ್ನ ಬಿಟ್ಟುಬಿಡಿʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗಿಂತ ಮುಂದೆ ಹೋಗಿ ಹೇಳುತ್ತಿದ್ದಾರೆ. ಈ ಹಿಂದೆ ರೀಡು ಮಾಡಿದವರು ಕೂಡ ಇವರೇ. ಅದರ ಸಂಬಂಧ ರಚನೆಯಾದ ಕೆಂಪಣ್ಣ ಆಯೋಗವನ್ನು ಮುಚ್ಚಿ ಹಾಕಿದ್ದಾರೆ. ಈಗ ದೇಸಾಯಿ ಆಯೋಗ ರಚಿಸಿದ್ದಾರೆ ಎಂದು ದೂರಿದರು.

ಟಿ.ಜೆ.ಅಬ್ರಹಾಂ ಕಳ್ಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಅಬ್ರಹಾಂ ಅವರನ್ನು ಬೆಂಬಲಿಸಿದ್ದರು. ಅಬ್ರಹಾಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಅಬ್ರಹಾಂ ಫ್ರಾಡ್‌ ಆಗಿದ್ದರೆ ಆ ಪ್ರಕರಣವನ್ನು ಸರ್ಕಾರ ವಾಪಸ್‌ ಪಡೆಯಲಿ. ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಿದರೆ ಅವರು ಒಳ್ಳೆಯವರು, ಕಾಂಗ್ರೆಸ್‌ ವಿರುದ್ಧ ಪ್ರಕರಣ ಹಾಕಿದರೆ ಅವರು ಫ್ರಾಡ್‌ ಆಗುತ್ತಾರೆ ಎಂದು ನಗೆಯಾಡಿದರು.

ಈ ಹಿಂದೆ ಹ್ಯೂಬ್ಲೋಟ್‌ ವಾಚ್‌ ಪ್ರಕರಣ ನಡೆದಾಗ ಅದು ನನ್ನದಲ್ಲ ಎಂದು ವಾಪಸ್‌ ಮಾಡಿದ್ದರು. ಈಗ ಮುಡಾ ಹಗರಣ ಹೊರಬಂದಾಗ, ಬಿಜೆಪಿಯವರೇ ನಿವೇಶನ ನೀಡಿದ್ದಾರೆ ಎನ್ನುತ್ತಿದ್ದಾರೆ. ದಲಿತರ ಕುಟುಂಬದ 27 ಹಕ್ಕುದಾರರಿದ್ದರೂ, ಅವರ ಜಮೀನನ್ನು ನುಂಗಿ ಹಾಕಿದ್ದಾರೆ. ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಹಾಗೂ ವಿವಿಧ ಹುದ್ದೆಗಳಲ್ಲಿದ್ದಾಗಲೇ ಈ ಹಗರಣ ನಡೆದಿದೆ. ವಕೀಲರಾಗಿದ್ದ ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕಾನೂನು ಪಾಠ ಮಾಡುತ್ತಿದ್ದರು. ಆದರೆ ಶ್ರೀಮತಿಯ ಹೆಸರಲ್ಲಿ ನಿವೇಶನ ನೋಂದಣಿಯಾದರೂ ಅದನ್ನು 10 ವರ್ಷಗಳ ಕಾಲ ನೋಡೇ ಇಲ್ಲ ಎಂದು ಸುಳ್ಳು ಹೇಳಿದ್ದಾರೆ. ಜೆಡಿಎಸ್‌ ಜೊತೆಗೆ ಅವರೇ ಮೈತ್ರಿ ಮಾಡಿಕೊಂಡು ಈಗ ಆಪಾದನೆ ಮಾಡುತ್ತಿದ್ದಾರೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಹಗರಣದ 187 ಕೋಟಿ ರೂ. ಹಣ ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ಸೇರಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಣದ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಆದರೆ ಚುನಾವಣೆಗೆ ದುಡ್ಡು ಲೂಟಿ ಹೊಡೆಯಲು ಅವರು ಸುಮ್ಮನಿದ್ದರು. ಆದರೂ ಇದರಲ್ಲಿ ತನ್ನ ಪಾತ್ರವಿಲ್ಲ ಎಂದೇ ಸಿಎಂ ಹೇಳುತ್ತಿದ್ದಾರೆ. ನಾನು 59 ದಾಖಲೆಗಳನ್ನು ಸದನದಲ್ಲಿ ನೀಡಿದ್ದೇನೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬ್ಯಾಂಕ್‌ ಅಧಿಕಾರಿಗಳು ಕೂಡ ಮನವಿ ಮಾಡಿದ್ದಾರೆ. ಈ ಹೋರಾಟವನ್ನು ಬಿಜೆಪಿ ತಾರ್ಕಿಕ ಅಂತ್ಯಕ್ಕೆ ಒಯ್ಯಲಿದೆ ಎಂದು ತಿಳಿಸಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರ 10 ವರ್ಷದಲ್ಲಿ ಕರ್ನಾಟಕಕ್ಕೆ ಅನುದಾನ ಕಡಿಮೆ ಮಾಡಿಲ್ಲ. ಯುಪಿಎ ಸರ್ಕಾರ ಕೊಟ್ಟ ಮೊತ್ತಕ್ಕಿಂತ 5 ಪಟ್ಟು ಹೆಚ್ಚು ಅನುದಾನವನ್ನು ಮೋದಿ ಸರ್ಕಾರ ನೀಡಿದೆ ಎಂದರು.

ಶನಿವಾರ ಸಮಾವೇಶ: ಬಿಜೆಪಿ ಪಾದಯಾತ್ರೆ ಅಂತಿಮ ಹಂತಕ್ಕೆ ತಲುಪಿದೆ. ಶನಿವಾರ ಮೈಸೂರಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಜನರು ನಮ್ಮನ್ನು ವಿರೋಧ ಪಕ್ಷವಾಗಿ ಆಯ್ಕೆ ಮಾಡಿದ್ದು, ಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು ಬಿಜೆಪಿಯ ಕರ್ತವ್ಯ. ಕಾಂಗ್ರೆಸ್‌ನ ಭ್ರಷ್ಟಾಚಾರ, ಅವ್ಯವಹಾರ, ಸ್ವಜನ ಪಕ್ಷಪಾತವನ್ನು ಜನರಿಗೆ ತಿಳಿಸಿ ಹೋರಾಟ ಮಾಡುವುದು ನಮ್ಮ ಹಕ್ಕು ಎಂದು ಹೇಳಿದರು.

ಡಿಕೆ ಶಿವಕುಮಾರ್‌ಗೂ ಆಸೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ನಮ್ಮ ಹೋರಾಟಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ. ಅವರ ಮನಸ್ಸಿನಲ್ಲೂ ಸಿಎಂ ಆಗಬೇಕೇಂಬ ಆಸೆ ಇದೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯಲಿ ಎಂದೇ ಅವರ ಮನಸ್ಸಿನಲ್ಲಿದೆ. ಅವರ ಅಜ್ಜಯ್ಯ ಕೂಡ ಡಿಸೆಂಬರ್‌ ಒಳಗೆ ಸಿಎಂ ಆಗಬೇಕು ಎಂದು ಭವಿಷ್ಯ ಹೇಳಿದ್ದಾರೆ ಎಂದು ಆರ್‌.ಅಶೋಕ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

2 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

2 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

2 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

2 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

3 hours ago