ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ, ಕಾವೇರಿ ನದಿಗೆ ನಾವೆಲ್ಲಾ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೇವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಕಳೆದ ವರ್ಷ ಸಾಕಷ್ಟು ಬರಗಾಲ ಇತ್ತು ಈಗ ಕಾವೇರಿ ತಾಯಿಯ ಕೃಪಡೆ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅಲ್ಲದೆ ೪೦ ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಿತ್ತು. ಸದ್ಯ ೨೦ ಟಿಎಂಸಿ ಬಿಡಿ ಎಂದು ಆದೇಶ ಆಗಿತ್ತು. ಆದರೆ ನಾವು ನಿರ್ಧಾರ ಮಾಡಿ ನೀರು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದಾರೆ ಅಂತಾ ಹೇಳ್ತಾರೆ. ಆದರೆ ನಾವು ಯಾವುದೇ ನೀರು ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದು ಹೋಗಿದೆ. ಇನ್ನು ೧೦ ಟಿಎಂಸಿ ನೀರು ಹರಿದು ಹೋದ್ರೆ ಈ ವರ್ಷದ ಗಡುವು ತೀರಲಿದೆ. ಸದ್ಯ ಡ್ಯಾಂ ನಿಂದ ೫೦ ಸಾವಿರ ಕ್ಯೂಸೆಕ್ ನೀರು ಹೋಗ್ತಿದೆ. ವರುಣನ ಕೃಪೆಯಿಂದ ಆದೇಶ ಪಾಲನೆ ಮಾಡಿದ್ದೇವೆ. ೧೪೫೫ ಕೆರೆಗಳು ಕಾವೇರಿ ಕೊಳ್ಳದಲ್ಲಿದೆ. ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.