ಮಂಡ್ಯ

ತಮಿಳುನಾಡಿಗೆ ನಾವು ಯಾವುದೇ ನೀರು ಬಿಟ್ಟಿಲ್ಲ, ಡ್ಯಾಂ ತುಂಬಿ ೩೦ಟಿಎಂಸಿ ನೀರು ಹರಿದು ಹೋಗಿದೆ- ಡಿಕೆಶಿ

ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು.

ಕೆಆರ್‌ ಎಸ್‌ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ, ಕಾವೇರಿ ನದಿಗೆ ನಾವೆಲ್ಲಾ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೇವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಕಳೆದ ವರ್ಷ ಸಾಕಷ್ಟು ಬರಗಾಲ ಇತ್ತು ಈಗ ಕಾವೇರಿ ತಾಯಿಯ ಕೃಪಡೆ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೆ ೪೦ ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಿತ್ತು. ಸದ್ಯ ೨೦ ಟಿಎಂಸಿ ಬಿಡಿ ಎಂದು ಆದೇಶ ಆಗಿತ್ತು. ಆದರೆ ನಾವು ನಿರ್ಧಾರ ಮಾಡಿ ನೀರು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದಾರೆ ಅಂತಾ ಹೇಳ್ತಾರೆ. ಆದರೆ ನಾವು ಯಾವುದೇ ನೀರು ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದು ಹೋಗಿದೆ. ಇನ್ನು ೧೦ ಟಿಎಂಸಿ ನೀರು ಹರಿದು ಹೋದ್ರೆ ಈ ವರ್ಷದ ಗಡುವು ತೀರಲಿದೆ. ಸದ್ಯ ಡ್ಯಾಂ ನಿಂದ ೫೦ ಸಾವಿರ ಕ್ಯೂಸೆಕ್‌ ನೀರು ಹೋಗ್ತಿದೆ. ವರುಣನ ಕೃಪೆಯಿಂದ ಆದೇಶ ಪಾಲನೆ ಮಾಡಿದ್ದೇವೆ. ೧೪೫೫  ಕೆರೆಗಳು ಕಾವೇರಿ ಕೊಳ್ಳದಲ್ಲಿದೆ. ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

41 mins ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

3 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

5 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

5 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

6 hours ago