Those who accept Ganga Aarti why oppose Cauvery Aarti?"MLA Ravikumar Ganiga hits back at BJP
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಬೂದನೂರು ಉತ್ಸವದ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಇಡೀ ರಾಜ್ಯ ಸಂಚಾರ ಮಾಡಿ ಪಕ್ಷವನ್ನು ಬಲಪಡಿಸಿ ೧೩೬ ಸ್ಥಾನ ಬರಲು ಬಹಳ ಶ್ರಮಿಸಿದ್ದಾರೆ. ಅವರ ಶ್ರಮದ ಬೆವರಿಗೆ ತಕ್ಕ ಫಲ ಸಿಗಲೇ ಬೇಕು. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಯತೀಂದ್ರ ಪವರ್‌ಫುಲ್ ಹೈಕಮಾಂಡ್
ಯತೀಂದ್ರ ಅವರು ಕಾಂಗ್ರೆಸ್ ಪಕ್ಷದ ಪವರ್‌ಫುಲ್ ಹೈಕಮಾಂಡ್. ಅವರು ಹೇಳಿದಂತೆ ಎಲ್ಲವೂ ನಡೆಯುತ್ತದೆ. ಅವರು ಹೈಕಮಾಂಡ್ ಆಗಿರುವುದರಿಂದ ಅವರಿಗೆ ನೋಟಿಸ್ ಕೊಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಯಾರೂ ಮಾತನಾಡಬಾರದು ಎಂದು ದೆಹಲಿಯಲ್ಲಿರುವ ನಮ್ಮ ಹೈಕಮಾಂಡ್ ಸೂಚನೆ ನೀಡಿದೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಾನು ಮಾತನಾಡಲ್ಲ, ಒಟ್ಟಿನಲ್ಲಿ ಅತೀ ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಅಭಿವೃದ್ಧಿ ಕಣ್ಣ ಮುಂದೆಯೇ ಇದೆ
ಮಂಡ್ಯ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳು ಜನರ ಕಣ್ಣ ಮುಂದೆಯೇ ಇವೆ. ಕಳೆದ ೮೦ ವರ್ಷಗಳಿಂದ ನಡೆಯದಂತಹ ಕೆಲಸಗಳು ನಮ್ಮ ಸರ್ಕಾರದಲ್ಲಿ ನಡೆದಿವೆ. ಆಡಿಕೊಳ್ಳುವವರ ಕಣ್ಣಿಗೆ ನಡೆದಿರುವ ಅಭಿವೃದ್ಧಿ ಕೆಲಸಗಳು ಕಾಣಲಿಲ್ಲ ಎಂದರೆ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಳೆದ ಎರಡೂವರೆ ವರ್ಷದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾವೇರಿ ನೀರಾವರಿ ನಿಗಮ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಂದ ಒಂದು ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕೆಲಸಗಳು ನಡೆದಿವೆ. ಹೊಸಬೂದನೂರು ಗ್ರಾಮದ ಕೆರೆ ಅಭಿವೃದ್ಧಿಗೆ ೫ ಕೋಟಿ ಸೇರಿದಂತೆ ೧೦ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹೇಳಿದರು.
ಎಚ್‌ಡಿಕೆ ನುಡಿದಂತೆ ನಡೆಯಲಿ:
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸೆಮಿಕಂಡಕ್ಟರ್ (ಕೈಗಾರಿಕಾ ವಲಯ)ಗೆ ೧೦೦ ಎಕರೆ ಭೂಮಿ ಕೇಳಿದ್ದರು. ಅದರಂತೆ ಮಂಡ್ಯ ತಾಲ್ಲೂಕಿನ ಬಸರಾಳು ಸಮೀಪ ೧೦೫ ಎಕರೆ ಭೂಮಿಯನ್ನು ನೀಡಲಾಗಿದ್ದು, ಅವರು ನುಡಿದಂತೆ ನಡೆದುಕೊಳ್ಳಬೆಕು ಎಂದು ಹೇಳಿದರು.
ಕೈಗಾರಿಕೆ ಬದಲು ಈಗ ಎಆರ್‌ಎಐ ಸ್ಥಾಪಿಸುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಹೊಂದಬೇಕು ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕೆಂಬುದು ನನ್ನ ಬಯಕೆ. ಅಽಕಾರ ಬರುತ್ತೆ ಹೋಗುತ್ತದೆ. ನಾವು ಮಾಡುವ ಒಳ್ಳೆಯ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಹಾಗಾಗಿ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಕುಮಾರಸ್ವಾಮಿ ಅವರು ಕೈಗಾರಿಕೆಯನ್ನಾದರೂ ತರಲಿ, ಎಆರ್‌ಎಐಯನ್ನಾದರೂ ತರಲಿ. ಒಟ್ಟಿನಲ್ಲಿ ನಮ್ಮ ಯುವಜನತೆಗೆ ಉದ್ಯೋಗ ಕೊಡಲಿ ಎಂದರು.
ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಒಳ್ಳೆಯ ಕಾರ್ಖಾನೆಗಳನ್ನು ತರುವ ಶಕ್ತಿ ಇದೆ. ಈ ಹಿನ್ನೆಲೆಯಲ್ಲಿ ಅವರ ಜತೆ ನಾನೂ ಸಹ ಕೈಜೋಡಿಸುತ್ತೇನೆ ಎಂದು ಹೇಳಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…