Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

ಮಾದಕ ವ್ಯಸನಗಳ ಸೇವನೆ ಬೇಡ : ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಎಸ್ಪಿ

ಮಂಡ್ಯ: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ನಿಗದಿಪಡಿಸಿಕೊಂಡು, ಸದಾ ಗುರಿಯ ಕಡೆಗೆ ಚಿಂತಿಸಬೇಕು. ಮಾದಕ ವ್ಯಸನಗಳು ನಿಮ್ಮ ಗುರಿಯ ಅಳಿಯನ್ನು ತಪ್ಪಿಸಬಹುದು. ಆಗಾಗಿ ಮಾದಕ ವ್ಯಸನಗಳ ಸೇವನೆ ಬೇಡ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್  ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ಇಂದು ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಕ್ಷಕ ಇಲಾಖೆ ಮತ್ತು ಅಬಕಾರಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಕುರಿತು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಗೆ ಹೆಚ್ಚಾಗಿ ವಿದ್ಯಾರ್ಥಿಗಳೇ ದಾಸರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರು ಮಾಡಿಕೊಳ್ಳುವ ಸ್ನೇಹಿತ ವರ್ಗ ಅಥವಾ ಜೀವನದಲ್ಲಿ ಗುರಿ ಸಾಧಿಸಲು ಶ್ರಮಿಸದೇ ಇರವುದು. ದೇಶದ ಮುಂದಿನ ಶಕ್ತಿಯಾಗಬೇಕಿರುವ ಯುವ ಜನತೆ ಇಂತಹ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಅದರಿಂದ ಸದಾ ದೂರವಿರಬೇಕು. ವಿದ್ಯಾರ್ಥಿಗಳು ಜ್ಞಾನಾರ್ಜನಗೆ ಮೊದಲ ಆದ್ಯತೆ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು‌ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯ ಮನರಂಜನೆಗೆ ಸಣ್ಣ ಸಮಯ ಮೀಸಲಿಡಿ. ವಿದ್ಯಭ್ಯಾಸಕ್ಕೆ ಹೆಚ್ಚಿನ ಸಮಯ ನೀಡಿ. ಮಾದಕ ವಸ್ತುಗಳನ್ನು ಸೇವನೆ ಮಾಡಬೇಡಿ, ತಮ್ಮ ಸುತ್ತಮುತ್ತಲಿನನವರಿಗೂ ಸೇವನೆ ಮಾಡದಂತೆ ಅರಿವು ಮೂಡಿಸಿ. ಮಾದಕ ವಸ್ತುಗಳ ಅಕ್ರಮವಾಗಿ ಸಾಗಾಣಿಕೆ ಮಾಡುವುದು ಶಿಕ್ಷರ್ಹ ಅಪರಾಧ ಎಂದರು.

ಜಾಗೃತಿ ಜಾಥಾ
ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಣಿಕೆ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥ ನಡೆಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳು ಮಾದಕ ದ್ರವ್ಯ ಬಳಸದಂತೆ ಅರಿವು ಮೂಡಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿಜ್ಞಾ ವಿಧಿ ಬೋಧಿಸಿದರು.

ಮಾದಕ ದ್ರವ್ಯದ ಪರಿಣಾಮ: ಮಾದಕ ದ್ರವ್ಯಗಳ ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿ ಬಳಕೆ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ, ಸಾವಿಗೆ ಕಾರಣವಾಗುತ್ತದೆ. ಇದು ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜನ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ.

ಮಾದಕ ದ್ರವ್ಯಗಳಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯವನ್ನು ನೇರವಾಗಿ ಪರಿಣಾಮ ಬೀರುತ್ತದೆ, ಇದು ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.

ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು.

ಮಾದಕ ವಸ್ತುಗಳ ಸೇವನೆ ಅಂಟು ಜಾಡ್ಯವಾಗಿದ್ದು, ಕೆಟ್ಟ ಚಾಳಿಯಿಂದ ಸಂಗಡಿಗರಿಗೆಲ್ಲ ಅಂಟಿಕೊಂಡು ಸಮಾಜದ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿ, ಸಮಾಜ ಹದಗೆಡಿಸುತ್ತದೆ.

ಮಾದಕ ವಸ್ತುಗಳ ಆಕ್ರಮ ಉತ್ಪಾದನೆ, ಸಾಗಾಣಿಕೆ, ಮಾರಾಟ ಅಪರಾಧವಾಗಿದ್ದು, ಈ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಸಾರ್ವಜನಿಕರು ಕೂಡಲೇ ಸೈಬರ್, ಆರ್ಥಿಕ ಮಾದಕ ದೃವ್ಯ ಅಪರಾಧ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿ ನಿಮ್ಮ ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಜಾಥಾದಲ್ಲಿ ಅರಿವು ಮೂಡಿಸಲಾಯಿತು.

Tags: