ಮಂಡ್ಯ

ಮಾದಕ ವ್ಯಸನಗಳ ಸೇವನೆ ಬೇಡ : ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಎಸ್ಪಿ

ಮಂಡ್ಯ: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ನಿಗದಿಪಡಿಸಿಕೊಂಡು, ಸದಾ ಗುರಿಯ ಕಡೆಗೆ ಚಿಂತಿಸಬೇಕು. ಮಾದಕ ವ್ಯಸನಗಳು ನಿಮ್ಮ ಗುರಿಯ ಅಳಿಯನ್ನು ತಪ್ಪಿಸಬಹುದು. ಆಗಾಗಿ ಮಾದಕ ವ್ಯಸನಗಳ ಸೇವನೆ ಬೇಡ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್  ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ಇಂದು ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಕ್ಷಕ ಇಲಾಖೆ ಮತ್ತು ಅಬಕಾರಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಕುರಿತು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಗೆ ಹೆಚ್ಚಾಗಿ ವಿದ್ಯಾರ್ಥಿಗಳೇ ದಾಸರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರು ಮಾಡಿಕೊಳ್ಳುವ ಸ್ನೇಹಿತ ವರ್ಗ ಅಥವಾ ಜೀವನದಲ್ಲಿ ಗುರಿ ಸಾಧಿಸಲು ಶ್ರಮಿಸದೇ ಇರವುದು. ದೇಶದ ಮುಂದಿನ ಶಕ್ತಿಯಾಗಬೇಕಿರುವ ಯುವ ಜನತೆ ಇಂತಹ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಅದರಿಂದ ಸದಾ ದೂರವಿರಬೇಕು. ವಿದ್ಯಾರ್ಥಿಗಳು ಜ್ಞಾನಾರ್ಜನಗೆ ಮೊದಲ ಆದ್ಯತೆ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು‌ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯ ಮನರಂಜನೆಗೆ ಸಣ್ಣ ಸಮಯ ಮೀಸಲಿಡಿ. ವಿದ್ಯಭ್ಯಾಸಕ್ಕೆ ಹೆಚ್ಚಿನ ಸಮಯ ನೀಡಿ. ಮಾದಕ ವಸ್ತುಗಳನ್ನು ಸೇವನೆ ಮಾಡಬೇಡಿ, ತಮ್ಮ ಸುತ್ತಮುತ್ತಲಿನನವರಿಗೂ ಸೇವನೆ ಮಾಡದಂತೆ ಅರಿವು ಮೂಡಿಸಿ. ಮಾದಕ ವಸ್ತುಗಳ ಅಕ್ರಮವಾಗಿ ಸಾಗಾಣಿಕೆ ಮಾಡುವುದು ಶಿಕ್ಷರ್ಹ ಅಪರಾಧ ಎಂದರು.

ಜಾಗೃತಿ ಜಾಥಾ
ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಣಿಕೆ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥ ನಡೆಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳು ಮಾದಕ ದ್ರವ್ಯ ಬಳಸದಂತೆ ಅರಿವು ಮೂಡಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿಜ್ಞಾ ವಿಧಿ ಬೋಧಿಸಿದರು.

ಮಾದಕ ದ್ರವ್ಯದ ಪರಿಣಾಮ: ಮಾದಕ ದ್ರವ್ಯಗಳ ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿ ಬಳಕೆ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ, ಸಾವಿಗೆ ಕಾರಣವಾಗುತ್ತದೆ. ಇದು ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜನ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ.

ಮಾದಕ ದ್ರವ್ಯಗಳಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯವನ್ನು ನೇರವಾಗಿ ಪರಿಣಾಮ ಬೀರುತ್ತದೆ, ಇದು ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.

ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು.

ಮಾದಕ ವಸ್ತುಗಳ ಸೇವನೆ ಅಂಟು ಜಾಡ್ಯವಾಗಿದ್ದು, ಕೆಟ್ಟ ಚಾಳಿಯಿಂದ ಸಂಗಡಿಗರಿಗೆಲ್ಲ ಅಂಟಿಕೊಂಡು ಸಮಾಜದ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿ, ಸಮಾಜ ಹದಗೆಡಿಸುತ್ತದೆ.

ಮಾದಕ ವಸ್ತುಗಳ ಆಕ್ರಮ ಉತ್ಪಾದನೆ, ಸಾಗಾಣಿಕೆ, ಮಾರಾಟ ಅಪರಾಧವಾಗಿದ್ದು, ಈ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಸಾರ್ವಜನಿಕರು ಕೂಡಲೇ ಸೈಬರ್, ಆರ್ಥಿಕ ಮಾದಕ ದೃವ್ಯ ಅಪರಾಧ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿ ನಿಮ್ಮ ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಜಾಥಾದಲ್ಲಿ ಅರಿವು ಮೂಡಿಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

20 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

41 mins ago

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

52 mins ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

1 hour ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

3 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

4 hours ago