ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಕುಟುಕಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆಯೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೂ ಇದೆ. ಚೆಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೇ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಚಿಕಿತ್ಸೆಯಾದ ಎರಡನೇ ದಿನಕ್ಕೆ ಆಚೆ ಬರುತ್ತಾರೆ. ಆಚೆ ಬಂದ ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ ಹೇಗೆ? ಎಂದು ಶಾಸಕರು ಪ್ರಶ್ನೆ ಮಾಡಿದರು.
ಇವೆಲ್ಲಾ ಚುನಾವಣೆಯ ಗಿಮಿಕ್. ನನಗೆ ಆ ತೊಂದರೆಯಿದೆ, ಈ ತೊಂದರೆಯಿದೆ ಎಂದು ಹೇಳಿದರೇ ಕೇಳಬೇಡಿ. ಅಧಿಕಾರದಲ್ಲಿದ್ದಾಗ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಈ ಚುನಾವಣೆ ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ. ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿ ಅಭಿವೃದ್ಧಿಗಾಗಿ ಹಕ್ಕು ಚಲಾಯಿಸಿ ಎಂದು ಸಲಹೆ ನೀಡಿದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…