ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು.
ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ ಹೋಟೆಲ್‌ನಲ್ಲಿ ನಾಯಿ ಮಾಂಸದ ಬಿರಿಯಾನಿ ಮಾರಾಟ ಮಾಡಲಾಗುತ್ತಿದೆ ಎಂದು ಪುಕಾರು ಹುಟ್ಟಿಕೊಂಡು ಜನರು ಹೋಟೆಲ್ ಮುಂದೆ ಜಮಾಯಿಸಿ ಗಲಾಟೆ ನಡೆಸಿದರೆನ್ನಲಾಗಿದೆ. ಚಿನಕುರುಳಿ ಪೊಲೀಸರು ಮದಿನ ಹೋಟೆಲ್‌ನ ಮಾಲೀಕನನ್ನು ವಿಚಾರಣೆ ನಡೆಸಿದ್ದಾರೆ. ವಾಸ್ತವದಲ್ಲಿ ಮೈಸೂರಿನಿಂದ ಚಿನಕುರುಳಿಗೆ ಕೋಳಿ ಮಾಂಸದ ಕೆಲ ಭಾಗಗಳನ್ನು ಸರಬರಾಜು ಮಾಡುವ ವೇಳೆ ಮಾಂಸ ವಾಸನೆ ಬಂದಿದ್ದು, ಇದು ತಿನ್ನಲು ಯೋಗ್ಯವೇ ಇಲ್ಲವೇ ಎಂಬುದನ್ನು ಪರೀಕ್ಷೆಗೆ ಕಳಿಸಿ ಎಂದು ಒಂದು ಗುಂಪು ಆಗ್ರಹಿಸಿತು.
ಅಲ್ಲದೆ, ಗಲಾಟೆ ಮಾಡಿ ಹೋಟೆಲ್‌ನ ಬಾಗಿಲು ಮುಚ್ಚಿಸಿತು. ಬಳಿಕ ಪೊಲೀಸರು ಮಾಂಸದ ಬ್ಯಾಗ್‌ಗಳನ್ನು ಪರೀಕ್ಷೆಗೆ ಕಳಿಸಿತು. ಅಷ್ಟರಲ್ಲಿ ಸಾರ್ವಜನಿಕ ವಲಯದಲ್ಲಿ ಹೊಟೆಲ್‌ನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅಪಪ್ರಚಾರಗಳು ನಡೆದು, ಪೊಲೀಸರು ಇದು ನಾಯಿ ಮಾಂಸವಲ್ಲ ಕೋಳಿ ಮಾಂಸದ ಭಾಗಗಳು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…