ಮಂಡ್ಯ

ಸಕ್ಕರೆ ನಾಡಿನಲ್ಲಿ ಶ್ವಾನಗಳ ರನ್ನಿಂಗ್‌ ರೇಸ್‌ ಝಲಕ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶ್ವಾನಗಳ ಓಟದ ಸ್ಪರ್ಧೆ ನಡೆದಿದ್ದು, ಜನರಂತೂ ಭಾರೀ ಆಸಕ್ತಿಯಿಂದ ಮುಗಿಬಿದ್ದು ವೀಕ್ಷಿಸಿದರು.

ಇಷ್ಟು ದಿನ ದೂರದ ದುಬೈನಂತಹ ದೇಶದಲ್ಲಿ ನಾಯಿಗಳ ಓಟದ ಸ್ಪರ್ಧೆಯನ್ನು ನಾವು ನೋಡಿದ್ವಿ. ಆದರೆ ಈಗ ನಮ್ಮ ದೇಶದಲ್ಲೇ ಮೊದಲ ಬಾರಿಗೆ ನಾಯಿಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಓಡುತ್ತಿದ್ದ ನಾಯಿಗಳ ಓಟ ಕಂಡು ನೆರೆದಿದ್ದವರು ಫುಲ್‌ ಎಂಜಾಯ್‌ ಮಾಡಿದರು.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಜಾಗಿನಕೆರೆ ಗ್ರಾಮದಲ್ಲಿ ಯುವಕರ ತಂಡವೊಂದು ಶ್ವಾನಗಳ ಓಟದ ಸ್ಪರ್ಧೆಯನ್ನು ಆಯೋಜಿಸಿತ್ತು. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸುಮಾರು 50ಕ್ಕೂ ಹೆಚ್ಚು ಶ್ವಾನಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು.

ಇನ್ನು ಈ ಯುವಕರು ಹಲವು ದಿನಗಳಿದ ಶ್ವಾನಗಳ ಸ್ಪರ್ಧೆ ನಡೆಸಲು ಚಿಂತನೆ ನಡೆಸಿದ್ದರು. ಹೀಗಾಗಿ ರೇಸ್‌ಗಾಗಿ ಇರುವ ಶ್ವಾನಗಳನ್ನು ತಂದು ಓಟದ ಸ್ಪರ್ಧೆಗೆ ಶ್ವಾನಗಳನ್ನು ಸಜ್ಜುಗೊಳಿಸಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದ ಈ ಓಟದ ಸ್ಪರ್ಧೆಯಲ್ಲಿ ಶ್ವಾನಗಳು ನಾ ಮುಂದು, ತಾ ಮುಂದು ಎಂದು ಓಡಿದವು. ಇದು ನೆರೆದಿದ್ದ ಜನರ ಮೈ ರೋಮಾಂಚನಗೊಳಿಸಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

27 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago