ಮಂಡ್ಯ

ಸಮರ್ಪಕ ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್.ಚೆಲುವರಾಯಸ್ವಾಮಿ

ಮಂಡ್ಯ : ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಅರಣ್ಯಾಧಿಕಾರಿಗಳು ಓಕ್ಕಲೆಬ್ಬಿಸುವ ಪ್ರಯತ್ನ ಮಾಡಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ರವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಾವೆಲ್ಲರೂ ರೈತಾಪಿ ಕುಟುಂಬದಿಂದ ಬಂದವರು ಹಾಗಾಗಿ ಹಳ್ಳಿಯ ಜೀವನಶೈಲಿ ನಮಗೆ ಹೊಸತಲ್ಲ, ಅರಣ್ಯ ಪ್ರದೇಶದಲ್ಲಿ ಜೀವನೋಪಾಯಕ್ಕಾಗಿ ಜೀವನ ನಡೆಸುತ್ತಿರುವ ಜನರ ಮೇಲೆ ಅಧಿಕಾರಿಗಳು ಒತ್ತಡ ಏರಬೇಡಿ ಎಂದು ಹೇಳಿದರು.

ಈಗಾಗಲೇ ಸರ್ಕಾರದಿಂದಲೇ ಜಾಗ ಗುರುತಿಸಿ ಅವರಿಗೆ ಭೂಮಿ( ಹಕ್ಕು) ಪತ್ರವನ್ನು ನೀಡಲಾಗಿದೆ, ಅಂತಹ ಸ್ಥಳಗಳನ್ನು ಕೈಬಿಟ್ಟು ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ ಸರ್ವೆ ನಡೆಸಿ, ಅರಣ್ಯಾಧಿಕಾರಿಗಳು ಕಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಕಾರ್ಯ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಅನೇಕ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆ ಇರುತ್ತದೆ ಅದರಿಂದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸರ್ಕಾರದಿಂದ ಅವರಿಗೆ ನೀಡಲಾಗಿರುವ ನಿವಾಸಗಳಲ್ಲಿ ಕಡ್ಡಾಯವಾಗಿ ವಾಸಿಸಬೇಕು, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ಅಂತಹ ಪ್ರಕರಣಗಳನ್ನು ಅತ್ತಿಕುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಗಣಿ ಅಧಿಕಾರಿಗಳು ಹೆಚ್ಚಿನ ದಕ್ಷತೆಯಿಂದ ಕಾರ್ಯ ನಿರ್ವಹಿಸಿ, ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಗಣಿಗಾರಿಕೆ ಅಥವಾ ಭೂ ಸಂಪತ್ತನ್ನು ಲೂಟಿ ಮಾಡುವ ಪ್ರಕರಣಗಳು ದಾಖಲಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಿ, ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಜಿಲ್ಲಾಧಿಕಾರಿ ಡಾ ಕುಮಾರ ಅವರು ಮಾತನಾಡಿ ಮದ್ದೂರಿನ ಶಿಂಷಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂದು ಮಾಹಿತಿ ಇದೆ, ಪ್ರಸ್ತುತ 17 ಕ್ಕೂ ಹೆಚ್ಚು ಮರಳು ದಂಧೆ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಜಾರಿಗೊಳಿಸಲಾಗಿದೆ, ಗಣಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಆಕ್ರಮ ಮರಳು ಸಾಗಾಣಿಕೆಗೆ ತಿಲಾಂಜಲಿ ಬಿಡಬೇಕು ಎಂದರು.

ಅರಣ್ಯ ಪ್ರದೇಶದಲ್ಲಿ ಸೂಕ್ತ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಓಕ್ಕಲೆಬ್ಬಿಸದೆ ಸಾಧ್ಯವಾದಲ್ಲಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಇಂತಹ ಸೂಕ್ಷ್ಮ ಪ್ರಕರಣಗಳನ್ನು ಕಾನೂನು ದೃಷ್ಟಿಯ ಜೊತೆಗೆ ಮಾನವಿಯತೆ ಇಂದಲೂ ನೋಡಬೇಕು ಎಂದು ಹೇಳಿದರು.

ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಇತ್ತೀಚೆಗೆ ನಾಗಮಂಗಲದಲ್ಲಿ ಬ್ಲಾಸ್ಟಿಂಗ್ನಿಂದ ಸಾವು ಸಂಭವಿಸಿದೆ, ಅರಣ್ಯ ಪ್ರದೇಶಗಳಲ್ಲಿ ಯಾರು ಯಾವುದೇ ರೀತಿಯ ಅನುಮತಿ ಇಲ್ಲದೆ ಸ್ಪೋಟಕ ವಸ್ತುಗಳನ್ನು ಬಳಸದಂತೆ ಕ್ರಮವಹಿಸಿ, ನಿಯಮ ಮೀರಿ ಯಾರಾದರೂ ದುಷ್ಕರ್ಮಿಗಳು ಸ್ಪೋಟಕಗಳನ್ನು ಸ್ಪೋಟಿಸಿದರೆ ಅಂತಹವರು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಪುಷ್ಪ, ಜಿಲ್ಲಾ ಅರಣ್ಯಾಧಿಕಾರಿ ರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

2 seconds ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

25 mins ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

49 mins ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

1 hour ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

2 hours ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

2 hours ago