ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು.
ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವೈದ್ಯಕೀಯ ಮಹಾವಿದ್ಯಾಲಯದ ಸಂವಾದ ಕಾರ್ಯಕ್ರಮ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿಸಿದರು.
ಐವತ್ತು ವರ್ಷಗಳ ಹಿಂದೆ ಸ್ಥಾಪನೆಯಾದ ಈ ವಿದ್ಯಾಸಂಸ್ಥೆಯಲ್ಲಿ ಜಾತಿ, ಧರ್ಮ ಭೇದವಿಲ್ಲದೆ ಎಲ್ಲ ಸಮುದಾಯಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಶಿಕ್ಷಣದ ಜೊತೆಗೆ ಸಂಸ್ಕೃತಿಯ ಸಾರವನ್ನು ಸಾರುತ್ತಿರುವ ಈ ಮಠವು ರಾಜ್ಯದಲ್ಲಿ ಅಷ್ಟೇ ಅಲ್ಲ ವಿದೇಶವು ಸೇರಿದಂತೆ 26 ಶಾಖಾ ಮಠದ ಜೊತೆಗೆ ಬಹಳಷ್ಟು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಅಂಧ, ಕಿವುಡ, ಹಾಗೂ ವಿಕಲಚೇತನ ಮಕ್ಕಳಿಗೆ ಶಾಲೆಗಳನ್ನು ನಡೆಸುತ್ತಿರುವುದು ಪ್ರಶಂಸನೀಯ ಎಂದರು.
ತಾಯಿ ಮತ್ತು ತಾಯಿನಾಡನ್ನು ಸದಾ ಗೌರವಿಸಿ ಸೇವೆ ಸಲ್ಲಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ವಿದ್ಯಾರ್ಥಿ ಹಂತದಲ್ಲೇ ಇಂತಹ ಗುಣಗಳನ್ನು ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಾಮಾಜಿಕ ಜಾಲತಾಣಗಳ ಮೂಲಕ ತಪ್ಪು ಸಂದೇಶಗಳನ್ನು ಹರಡುತ್ತಿರುವುದು ಆತಂಕಕಾರಿ ಬೆಳವಣಿಗೆ ಜೊತೆಗೆ ಇದು ದೇಶಕ್ಕೂ ಅಪಾಯ. ಹೀಗಾಗಿ, ಉತ್ತಮ ಜ್ಞಾನ ಬೆಳಸಿಕೊಳ್ಳಲು ಸಾಮಾಜಿಕ ಮಾಧ್ಯಮವನ್ನು ಬಳಸಿಕೊಳ್ಳಿ. ಅಬ್ದುಲ್ ಕಲಾಂರವರ ಕಲ್ಪನೆಯನಂತೆ ಪ್ರತಿಯೊಬ್ಬರೂ ಕನಸು ಕಾಣಬೇಕು. ಗುರಿ ತಲುಪಲು ಪರಿಶ್ರಮ ಹಾಗೂ ಜ್ಞಾನ ಅವಶ್ಯಕ. ಗುರಿ ಮುಟ್ಟುವಾಗ ಕೆಲವೊಮ್ಮೆ ಸೋಲನ್ನು ಅನುಭವಿಸಬೇಕಾಗುತ್ತದೆ. ಸೋಲು ಗೆಲುವಿನ ಮೆಟ್ಟಿಲು ಎಂಬುದನ್ನು ಮರೆಯದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಚ್.ಡಿ ದೇವೇಗೌಡರು ಕೇವಲ ಮಾಜಿ ಪ್ರಧಾನಿಯಲ್ಲ, ಅವರೊಬ್ಬ ರೈತ ಪ್ರಧಾನಮಂತ್ರಿ ಎಂದು ಎಚ್.ಡಿ. ದೇವೇಗೌಡ ಅವರ ಸಾಧನೆಗಳ ಬಗ್ಗೆ ಬಣ್ಣಿಸಿದರು.
ಗುಜರಾತ್ ರಾಜ್‌ಕೋಟ್‌ನ ಹರ್ಷ ವಿದ್ಯಾಮಂದಿರ ಪರಮಾತ್ಮನಂದ ಸರಸ್ವತಿ ಜೀ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪೇಟ ತೊಡಿಸಿ, ಮೈಸೂರು ದಸರಾ ಮೆರವಣಿಗೆಯ ಕಲಾಕೃತಿ ನೀಡಿ ಸನ್ಮಾನಿಸಿದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…