ಮಂಡ್ಯ : ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ.
ಅವುಗಳನ್ನು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಪರಿಹರಿಸುತ್ತದೆ ಎಂದು ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ಎಚ್. ಎನ್. ಗೋಪಾಲ ಕೃಷ್ಣ ಭರವಸೆ ನೀಡಿದ್ಧಾರೆ.
ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್. ಅಶ್ವತಿ ಡಾ. ಎಚ್. ಎನ್. ಗೋಪಾಲ ಕೃಷ್ಣ ಅವರಿಗೆ ತಮ್ಮ ಅಧಿಕಾರ ಹಸ್ತಾಂತರಿಸಿದರು.





