ಮಂಡ್ಯ

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್‌ಒ) ಡಾ. ಕೆ. ಮೋಹನ್ ಅವರನ್ನು ಮೈಸೂರು ಜಿಲ್ಲಾ ಅಬಕಾರಿ ಉಪ ಆಯುಕ್ತರ (Deputy Commissioner of Excise) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಸದ್ಯ ಇದು ವಿವಾದಕ್ಕೆ ಕಾರಣವಾಗಿದ್ದು, ಆರೋಗ್ಯ ಅಧಿಕಾರಿಯನ್ನು ಅಬಕಾರಿಗೆ ವರ್ಗಾವಣೆ ಮಾಡಿದ್ದು ಏತಕ್ಕೆ? ಸರ್ಕಾರ ಹಳಿ ತಪ್ಪಿರುವುದರಿಂದ ಇದೆಲ್ಲಾ ಆಗಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧಿ ಕಿಡಿಕಾರಿವೆ. ಸರ್ಕಾರಿ ಅಧಿಕಾರಿಗಳ ನಿಯಮ ಪ್ರಕಾರ ಮೂಲ ಇಲಾಖೆಯಿಂದ ಬೇರೆ ಇಲಾಖೆ ವರ್ಗಾಯಿಸುವಂತಿಲ್ಲ. ಅದರಲ್ಲೂ ಆರೋಗ್ಯ ಅಧಿಕಾರಿಯನ್ನು ಅಬಕಾರಿ ಅಧಿಕಾರಿಯನ್ನಾಗಿ ನೇಮಿಸುವುದು ಸಾಧ್ಯವಿಲ್ಲ. ವರ್ಗಾವಣೆ ಪತ್ರದ ಟಿಪ್ಪಣಿಯಲ್ಲಿ ಖುದ್ದು ಸಿಎಂ ಸಹಿ ಇದೆ. ಇದೆಲ್ಲಾ ಹೇಗೆ ಸಾಧ್ಯ? ಸರ್ಕಾರದಲ್ಲಿ ಯಾರ ಹಸ್ತಕ್ಷೇಪ ಇದೆ ಎಂದೆಲ್ಲಾ ವಿಪಕ್ಷಗಳು ಪ್ರಶ್ನಿಸಿವೆ.

ಡಾ.ಕೆ.ಮೋಹನ್ ಅವರು ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮೈಸೂರು ಜಿಲ್ಲಾ ಅಬಕಾರಿ ಉಪ ಆಯುಕ್ತ ಆರ್. ನಾಗಶಯನ ಅವರನ್ನು ಲಂಚ ಆರೋಪದ ಮೇಲೆ ಸರ್ಕಾರ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಈ ಹುದ್ದೆಗೆ ಹೊಸ ಅಧಿಕಾರಿಯನ್ನು ನಿಯೋಜಿಸುವ ಸಲುವಾಗಿ ಡಾ. ಮೋಹನ್ ಅವರನ್ನು ಆರೋಗ್ಯ ಇಲಾಖೆಯಿಂದ ವರ್ಗಾವಣೆ ಆಗಿದೆ.

ಅನ್ಯ ಇಲಾಖೆಗೆ ವರ್ಗಾವಣೆ ಇಲ್ಲ ; ಆರೋಗ್ಯ ಸಚಿವರ ಸ್ಪಷ್ಟನೆ
ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ಆಗುವುದಿಲ್ಲ. ಏತಕ್ಕೆ ಹೀಗೆ ಆಗಿದೆ ಎಂದು ಮಾಹಿತಿ ಪಡೆದು ವಿವರ ನೀಡಲಿದ್ದಾನೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

1 hour ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

2 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

2 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

3 hours ago