ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ತರಬೇತಿ ಕೇಂದ್ರ ಪ್ರಾರಂಭಿಸಲು 9.5 ಎಕರೆ ಸ್ಥಳವನ್ನು ಪ್ರಾದೇಶಿಕ ಸಾರಿಗೆ ಇಲಾಖೆಗೆ ಹಸ್ತಾಂತರಿಸಿ ಮಾತನಾಡಿದರು.
ಭೂ ಸುರಕ್ಷಾ ಯೋಜನೆಗೆ ಚಾಲನೆ
ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಪುರಾತನ ಕಾಲದಿಂದಿರುವ ಆಸ್ತಿ ಪತ್ರಗಳು ಹಾಗೂ ಇನ್ನಿತರೆ ದಾಖಲೆಗಳನ್ನು ಡಿಜಟಲೀಕರಣ ಮಾಡುವ ಭೂ ಸುರಕ್ಷಾ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದರಿಂದ ಯಾವುದೇ ದಾಖಲೆಗಳನ್ನು ಮುಂದೆ ಕಳೆದುಹೋಗುವುದು, ತಿದ್ದುವುದು ತಪ್ಪುತ್ತದೆ ಎಂದರು.
31 ಕೋಟಿ ರೂ ವೆಚ್ಚದಲ್ಲಿ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವಿತರಣಾ ಜಾಲ ವ್ಯವಸ್ಥೆಯನ್ನು ಒದಗಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದರಿಂದ ಹೆಚ್ಚುವರಿ ಟ್ಯಾಂಕ್ ಹಾಗೂ ಮನೆ- ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ ಒದಗಿಸಲಾಗುವುದು ಎಂದರು.
1 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ, 55 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡವನ್ನು ಉದ್ಘಾಟಿಸಲಾಗಿದೆ. 5 ಕೋಟಿ ರೂ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದೇ ರೀತಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಬೆಳ್ಳೂರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಸಹ ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಸಮಯಾವಕಾಶ ನೀಡುವುದರೊಂದಿಗೆ ಸಹಕರಿಸಬೇಕು ಎಂದರು.
ಪಟ್ಟಣ ಪಂಚಾಯಿತಿಯ ವ್ಯಾಪ್ತಿ ಹೆಚ್ಚಳವಾಗುತ್ತಿದ್ದು, 70 ಕೋಟಿ ರೂ ವೆಚ್ಚದಲ್ಲಿ ಒಳ ಚರಂಡಿ ಕೆಲಸಗಳು ಹಾಗೂ ಸುತ್ತ ಮುತ್ತಲಿನ ರಸ್ತೆಯನ್ನು 7 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಬೆಳ್ಳೂರಿನಲ್ಲಿ ಪಟ್ಟಣ ಪಂಚಾಯಿತಿ ಹೊಸ ಕಟ್ಟಡ, ಬಸ್ ನಿಲ್ದಾಣ, ನಾಡ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಅವರು ಬಸ್ ನಿಲ್ದಾಣಕ್ಕೆ ಮಂಜೂರು ಮಾಡಲಾಗಿರುವ 1 ಎಕರೆ 30 ಕುಂಟೆ ಸ್ಥಳವನ್ನು ಹಸ್ತಾಂತರ ಮಾಡಿದರು.
ಸಾರ್ವಜನಿಕರು ಕುಂದು ಕೊರತೆಗಳನ್ನು ದಾಖಲಿಸಲು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ತಹಶೀಲ್ದಾರ್ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆಯನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ಪರಿಹರಿಸಬೇಕು ಎಂದರು.
ಪ್ರತಿ ತಾಲ್ಲೂಕಿಗೆ 220 ಕೋಟಿ ರೂ
ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಾಲ್ಲೂಕಿಗೆ ಒಂದು ವರ್ಷಕ್ಕೆ 220 ಕೋಟಿ ರೂ ನೇರವಾಗಿ ಒದಗಿಸಲಾಗುವುದು. ಇದರೊಂದಿಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಆದರ್ಶ, ಬೆಳ್ಳೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಮೂಡಲಪ್ಪ, ದಿನೇಶ್, ಸುರೇಶ್, ರಾಜೇಶ್, ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…