ಮಂಡ್ಯ

ಬರಗಾಲ ಹಿನ್ನೆಲೆ ಕಬ್ಬಿನ ಕೊರತೆ ಎದುರಾಗಬಹುದು: ಎನ್‌ ಚಲುವರಾಯಸ್ವಾಮಿ

ಮಂಡ್ಯ: ಬರಗಾಲ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿ ಕಬ್ಬಿನ ಕೊರತೆ ಉಂಟಾಗಲಿದ್ದು, ಲಾಭ-ನಷ್ಟ ನೋಡಿ ಕಾರ್ಖಾನೆ ನಡೆಸುತ್ತಿಲ್ಲ. ರೈತರಿಗೆ ಅನುಕೂಲವಾದರೆ ಸಾಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ಭಾನುವಾರ ನಗರದ ಮೈಶುಗರ್‌ ಕಾರ್ಖಾನೆಯ ಬಾಯ್ಲರ್‌ಗೆ  ಪೂಜೆ ಅಗ್ನಿ ಸ್ಪರ್ಶ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಮೈಶುಗರ್‌ ಕಾರ್ಖಾನೆಯು ಸರ್ಕಾರದ ನೆರವಿನಿಂದ ಪುನಾರಂಭವಾಗಿದ್ದು, ಈ ಬಾರಿ ಕಬ್ಬು ಹರೆಯಲು ಯಾವುದೇ ಅಡೆತಡೆಯಿಲ್ಲದೆ ಸಜ್ಜಾಗಿದೆ ಎಂದರು.

ಜಿಲ್ಲೆಯ ರೈತರು ಕಳೆದ ಬಾರಿ ಬರಗಾಲ ಎದುರಿಸಿದ್ದಾರೆ, ಹೀಗಾಗಿ ಈ ಬಾರಿ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ.ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿದ್ದು, ಪ್ರಸ್ತುತ 1,90,000 ಮರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ಹೊರಜಿಲ್ಲೆಯ ಮೂಲಕ ನುರಿಸಲಾಗುವುದು ಎಂದರು.

ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

32 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

42 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

49 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

59 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago