ಮಂಡ್ಯ: ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು.
ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು ತೀವ್ರ ಬರದಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ರೈತರ ಬರ ಪರಿಹಾರ ಹಣವನ್ನು ಸಾಲಕ್ಕೆ ಹೊಂದಾಣಿಕೆ ಮಾಡದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಸಾಲಕ್ಕೆ ಹೊಂದಣಿಕೆ ಮಾಡಿಕೊಂಡಿದ್ದರೆ ಅದನ್ನು ರೈತರ ಖಾತೆಗೆ ಹಿಂದಿರುಗಿಸಿ, ಈ ಬಗ್ಗೆ ದೂರು ಬರದಂತೆ ನೋಡಿಕೊಳ್ಳಿ, ಒಂದು ವೇಳೆ ಸಾಲದ ಖಾತೆಗ ಜಮೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಳೆದ ಸಾಲಿನಲ್ಲಿ ಪ್ರಾಣಿ ದಾಳಿಯಿಂದ ಉಂಟಾದ ಬೆಳೆ ನಷ್ಟ ಕುರಿತಂತೆ 568 ಪ್ರಕರಣಗಳು ವರದಿಯಾಗಿದೆ. ಇವುಗಳಿಗೆ ಪಾವತಿಯಾಗಿರುವ ಪರಿಹಾರ ಕುರಿತಂತೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಮಳೆ, ಗಾಳಿಯಿಂದ ಮರದ ಕೊಂಬೆಗಳು ವಿದ್ಯುತ್ ಸಂಪರ್ಕದ ಲೈನ್ ಮೇಲೆ ಬೀಳುತ್ತಿದ್ದು, ವಿದ್ಯುತ್ ಅಡಚಣೆ ಉಂಟಾಗುತ್ತಿದೆ ಎಂದು ದೂರುಗಳು ಬರುತ್ತಿವೆ. ತೊಂದರೆ ಉಂಟು ಮಾಡುವ ಮರದ ಕೊಂಬೆಗಳನ್ನು ತೆರವುಗೊಳಿಸಿ. ಮಳೆ, ಗಾಳಿಯಿಂದ ವಿದ್ಯುತ್ ಕಂಬಗಳು ಬಿದ್ದಲ್ಲಿ ಅದಷ್ಟು ಬೇಗ 24 ಗಂಟೆಯೊಳಗಾಗಿ ಸರಿಪಡಿಸಿ ಎಂದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಉಪ ವಿಭಾಗಾಧಿಕಾರಿ ಮಹೇಶ್, , ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಅರಣ್ಯ ಇಲಾಖೆಯ ಅಧಿಕಾರಿ ಶಿಲ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ ಸುರೇಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…