ಮಂಡ್ಯ

ಕೆಆರ್‌ಎಸ್‌ ನೀರಿನ ಮಟ್ಟ ಏರಿಕೆ : 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ಒಳಹರಿವು

ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ.

ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್‍ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ.

ಕೆಆರ್‍ಎಸ್ ಡ್ಯಾಂ 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿದ್ದು, ಶನಿವಾರ 102.00 ಅಡಿ ಇದ್ದ ಡ್ಯಾಂನ ನೀರಿನ ಮಟ್ಟವು ಭಾನುವಾರ 103.70 ಅಡಿಗೆ ಏರಿಕೆಯಾಗಿದೆ. ಡ್ಯಾಂಗೆ 17,544 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಡ್ಯಾಂನಿಂದ 735 ಕ್ಯೂಸೆಕ್ ನೀರಿನ ಹೊರಹರಿವಿದೆ. 49.452 ಟಿಎಂಸಿ ಸಾಮರ್ಥ್ಯವಿರುವ ಡ್ಯಾಂನಲ್ಲಿ 25.851 ಟಿಎಂಸಿ ನೀರು ಸಂಗ್ರಹವಾಗಿದೆ. ಇದೀಗ ಜೂನ್ ತಿಂಗಳ ಮೊದಲ ದಿನವೇ ಡ್ಯಾಂ ಅರ್ಧದಷ್ಟು ಭರ್ತಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

17 mins ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

27 mins ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

1 hour ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

2 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

2 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

2 hours ago