ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಜಲಾಶಯದಿಂದ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 52,856 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 56,474 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ 24 ಗೇಟ್‌ಗಳ ಮೂಲಕ ನೀರು ಹೊರಬಿಡಲಾಗಿದ್ದು, ಕಾವೇರಿ ನದಿ ಭೋರ್ಗರೆದು ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನದಿಗೆ ಇಳಿಯದಂತೆ ಜನರಿಗೆ ಸೂಚನೆ ನೀಡಲಾಗಿದ್ದು, ಸೇತುವೆಗಳ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

8 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

9 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

9 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

9 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

9 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

10 hours ago