ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು.
ತಾಲ್ಲೂಕಿನ ೪೨ ವಿವಿಧ ಗ್ರಾಪಂ ವ್ಯಾಪ್ಯಿಯಲ್ಲಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನೋಂದಾಯಿತ ಕುಟುಂಬಗಳ ಜಾಬ್‌ಕಾರ್ಡ್‌ಗಳಿಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪಾರದರ್ಶಕ ಆಡಳಿತ ಜಾರಿಗೆ ತರುವ ಹಿನ್ನೆಲೆಯಲ್ಲಿ ಪ್ರತಿ ಜಾಬ್‌ಕಾರ್ಡ್‌ನ ಪ್ರತಿಯೊಬ್ಬ ಕೂಲಿಕಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳಿಗೆ ಕಡ್ಡಾಯವಾಗಿ ಮಾಡಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ:-ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್ ಮೇಲೆ ಪಾಕ್ ವೈಮಾನಿಕ ದಾಳಿ, ಸಾವಿನ ಶಂಕೆ
ತಾಲ್ಲೂಕಿನ ೪೨ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅ.೩೧ ಇ-ಕೆವೈಸಿ ಮಾಡಿಸುವ ಕೊನೆ ದಿನಾಂಕವಾಗಿದೆ. ಆದ್ದರಿಂದ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಜಾಬ್‌ಕಾರ್ಡ್, ಆಧಾರ್ ಕಾರ್ಡ್ ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಎ.ಡಿ.ಮಂಜುನಾಥ ಮಾತನಾಡಿ ನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರಲ್ಲಿ ಸಕ್ರಿಯ ಕೂಲಿಕಾರರ ಮಾಹಿತಿಯನ್ನು ಎಸ್‌ಎಂಎಂಎಸ್ ಮೊಬೈಲ್ ತಂತ್ರಾಂಶದಲ್ಲಿ ಇ-ಕೆವೈಸಿ ಮಾಡುವ ಬಗ್ಗೆ ಈಗಾಗಲೇ ಎಲ್ಲ ಗ್ರಾಪಂ, ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ನರೇಗಾ ತಂತ್ರಾಂಶದಲ್ಲಿ ಇ-ಕೆವೈಸಿ ಅಪ್ಡೆಟ್ ಮಾಡಿಸಲು ಗ್ರಾಪಂ ಮಟ್ಟದ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಮನೆ ಮನೆಗೆ ಗ್ರಾಪಂ ಸಿಬ್ಬಂದಿ ಇ-ಕೆವೈಸಿ ಮಾಡಿಸಿಕೊಳ್ಳಲು ಬರುತ್ತಿದ್ದು, ಅವರಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಕೆವೈಸಿಯ ಹೆಚ್ಚಿನ ಮಾಹಿತಿಗೆ ಆಯಾ ಗ್ರಾಪಂ ಪಿಡಿಒ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಬಹುದು ಎಂದು ರಾಮಲಿಂಗಯ್ಯ ಮಾಹಿತಿ ನೀಡಿದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…