ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, EDಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಿಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಸೆಂಬರ್.24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ EDಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.
ಇನ್ನು ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಯುತ್ತಿದೆ ಎಂದರು. ಈ ವೇಳೆ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…