Mysore
23
mist

Social Media

ಮಂಗಳವಾರ, 18 ನವೆಂಬರ್ 2025
Light
Dark

ಬರಡು ನೆಲದಲ್ಲಿ ವಿದ್ಯಾಲಯ ಸ್ಥಾಪಿಸಿದ ಶ್ರೀಗಳು: ಎಚ್‌.ಡಿ ದೇವೇಗೌಡ ಅಭಿಮತ

ನಾಗಮಂಗಲ(ಮಂಡ್ಯ ಜಿಲ್ಲೆ): 50 ವರ್ಷಗಳ ಹಿಂದೆ ಡಾ:ಬಾಲಗಂಗಾಧರನಾಥ್ ಸ್ವಾಮೀಜಿ ಅವರು ಬರಡು ನೆಲದ ಈ ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕು ತಂದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದರು.

ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಉಪರಾಷ್ಟ್ರತಿ ಜಗದೀಪ್‌ ಧನಕರ್‌ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ವೈದ್ಯಕೀಯ ಮಹಾವಿದ್ಯಾಲಯದ ಸಂವಾದ ಕಾರ್ಯಕ್ರಮ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಭ್ಯಾಸಕ್ಕೆ ಯಾವುದೇ ಜಾತಿ, ಬಡತನ ಸಿರಿತನದ ಗೋಡೆ ಇಲ್ಲ. ಎಲ್ಲರಿಗೂ ಸಹ ಶಿಕ್ಷಣ ಸಿಗಬೇಕು ಎಂಬುದು ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಆಶಯವಾಗಿತ್ತು. ಅವರು ಸ್ಥಾಪಿಸಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡಿ ದೇಶ ವಿದೇಶಗಳಲ್ಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ʻಭಾರತ ರತ್ನʼ ಸಿಗಬೇಕಿತ್ತು ಎಂದು ಹೇಳಿದರು.

ಪ್ರಸ್ತುತ ರಾಜ್ಯ ಮತ್ತು ಲೋಕಸಭೆಯಲ್ಲಿ ಘನತೆ, ಶಿಸ್ತು ಇಲ್ಲವಾಗಿದೆ. ಕೇಲವ ಕಚ್ಚಾಟದ ಮಾತುಗಳೇ ಹೆಚ್ಚಾಗಿದೆ. ಇವರೆಲ್ಲರನ್ನೂ ನಿಯಂತ್ರಿಸುತ್ತಿರುವ ಜಗದೀಪ್ ಧನಕರ್‌ ಅವರ ತಾಳ್ಮೆ-ಜಾಣ್ಮೆ ಮೆಚ್ಚುವಂಥದ್ದು ಎಂದು ಶ್ಲಾಘಿಸಿದರು.

ಆದಿಚುಂಚನಗಿರಿ ಮಠದ ಪೀಠಧ್ಯಕ್ಷರಾದ ಡಾ. ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, ಈ ಹಿಂದೆ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದ್ದರು. 20 ವರ್ಷಗಳ ನಂತರ ರಾಷ್ಟ್ರದ ಉಪರಾಷ್ಟ್ರಪತಿಗಳು ಸಂವಾದ ನಡೆಸಲು ನಮ್ಮ ಸಂಸ್ಥೆಗೆ ಆಗಮಿಸಿರುವುದು ಅವಿಸ್ಮರಣೀಯಗಳಿಗೆ ಎಂದರು.

ನಮ್ಮ ಸಂಸ್ಥೆಯಲ್ಲಿರುವ ಶೇಕಡಾ 90ರಷ್ಟು ಮಕ್ಕಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳೆ ಆಗಿದ್ದಾರೆ. ಇಂದಿನ ವೈಜ್ಞಾನಿಕ ಹಾಗೂ ತಂತ್ರಜ್ಞಾನಕ್ಕೆ ತಕ್ಕಂತೆ ಡಿಜಿಮೆಡ್ ಆಪ್ ಬಿಡುಗಡೆಗೊಳಿಸಿದ್ದೇವೆ. ಇಲ್ಲಿನ ವೈದ್ಯಕೀಯ ವಿದ್ಯಾರ್ಥಿಗಳು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಬಗ್ಗೆ ತಿಳಿದುಕೊಂಡು ಟೆಕ್ಬೋ ಡಾಕ್ಟರ್ ಗಳಾಗಿ ಹೊರಹೊಮ್ಮಲ್ಲಿ ಎಂದು ಆಶಿಸಿದರು.

ಗುಜರಾತ್‌ ರಾಜ್‌ಕೋಟ್‌ನ ಹರ್ಷ ವಿದ್ಯಾಮಂದಿರ ಪರಮಾತ್ಮನಂದ ಸರಸ್ವತಿ ಜೀ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಪೇಟ ತೊಡಿಸಿ, ಮೈಸೂರು ದಸರಾ ಮೆರವಣಿಗೆಯ ಕಲಾಕೃತಿ ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಉಪರಾಷ್ಟ್ರಪತಿ ಪತ್ನಿ ಸುದೇಶ್ ಧನಕರ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Tags:
error: Content is protected !!