Mysore
30
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ವೃದ್ಧೆಯನ್ನು ವಂಚಿಸಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಹಲಗೂರು: ವೃದ್ಧೆಯೊಬ್ಬರ ಗಮನ ಬೇರೆಡೆಗೆ ಸೆಳೆದು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಹಲಗೂರಿನ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ.

ಇಲ್ಲಿನ ಕೆಂಪೇಗೌಡ ಬಡಾವಣೆ ನಿವಾಸಿ ಕಮಲಮ್ಮ ಎಂಬುವವರೇ ಚಿನ್ನಾಭರಣ ಕಳೆದುಕೊಂಡವರು.

ಗುರುವಾರ ಸಂಜೆ ತಮ್ಮ ಮನೆಯ ಜಗಲಿಯ ಮೇಲೆ ಕುಳಿತಿದ್ದಾಗ ಆಕ್ಟಿವಾ ಹೊಂಡಾ ಸ್ಕೂಟರ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮನೆಯ ವಿಳಾಸ ಕೇಳುವ ನೆಪದಲ್ಲಿ ಕಮಲಮ್ಮ ಅವರನ್ನು ಪರಿಚಯಿಸಿಕೊಂಡಿದ್ದಾರೆ.

ಈ ವೇಳೆ ಕಮಲಮ್ಮ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದು, ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!