Mysore
15
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಹೆಚ್‌ಡಿಕೆ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮೈತ್ರಿ ನಾಯಕರ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರಿಗಾಗಿ ಬಾಡೂಟ ತಯಾರಿಸಲಾಗಿತ್ತು. ಆದರೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಚಿಕನ್‌, ಮಟನ್‌, ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್‌ಡಿಕೆ ʼಕಾಂಗ್ರೆಸ್‌ ಸರ್ಕಾರ ಸರ್ಕಾರ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ತಹಶೀಲ್ದಾರ್‌ಗೆ ಪದೇ ಪದೆ ಕರೆ ಮಾಡಿ ಒತ್ತಡ ಹಾಕಿಸಿದ್ದಾರೆ. ನಮ್ಮ ಮನೆಯಲ್ಲಿ ಪರಿಶೀಲಿಸಿದ್ದಾರೆ ಅಲ್ಲಿ ಏನೂ ಸಿಕ್ಕಿಲ್ಲ. ನನ್ನ ತೋಟದ ಮನೆಯಲ್ಲಿ 120 ಜನ ಕೆಲಸ ಮಾಡುತ್ತಿದ್ದು, ಅವರಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

 

 

Tags:
error: Content is protected !!