ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮೈತ್ರಿ ನಾಯಕರ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರಿಗಾಗಿ ಬಾಡೂಟ ತಯಾರಿಸಲಾಗಿತ್ತು. ಆದರೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಚಿಕನ್, ಮಟನ್, ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್‌ಡಿಕೆ ʼಕಾಂಗ್ರೆಸ್ ಸರ್ಕಾರ ಸರ್ಕಾರ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ತಹಶೀಲ್ದಾರ್‌ಗೆ ಪದೇ ಪದೆ ಕರೆ ಮಾಡಿ ಒತ್ತಡ ಹಾಕಿಸಿದ್ದಾರೆ. ನಮ್ಮ ಮನೆಯಲ್ಲಿ ಪರಿಶೀಲಿಸಿದ್ದಾರೆ ಅಲ್ಲಿ ಏನೂ ಸಿಕ್ಕಿಲ್ಲ. ನನ್ನ ತೋಟದ ಮನೆಯಲ್ಲಿ 120 ಜನ ಕೆಲಸ ಮಾಡುತ್ತಿದ್ದು, ಅವರಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…