ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ 9 ಮತಗಟ್ಟೆಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೀಕ್ಷಕರು ಇಂದು ಮಂಡ್ಯ ತಾಲ್ಲೂಕು ಪಂಚಾಯತ್ ಹಾಗೂ ತಾಲ್ಲೂಕು ಕಚೇರಿಯಲ್ಲಿ ತೆರೆಯಲಾಗುವ ಮತಗಟ್ಟೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
ಇದಕ್ಕೂ ಮುನ್ನ ಚುನಾವಣೆಯ ಸಹಾಯಕ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಂದ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಪರಿಶೀಲನೆಯ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜು, ಮಂಡ್ಯ ತಹಶೀಲ್ದಾರ್ ಶಿವಕುಮಾರ ಬಿರಾದಾರ್ ಉಪಸ್ಥಿತರಿದ್ದರು.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…