Mysore
13
few clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಚುನಾವಣೆಗೆ ಕೇಲವೇ ದಿನ ಬಾಕಿ : ಮತದಾರರಿಗೆ ಆಮಿಷ ತಡೆಯಲು ಚುನಾವಣಾ ಅಧಿಕಾರಿ ಸಜ್ಜು

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಚುನಾವಣಾ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಎಫ್.ಎಸ್.ಟಿ ತಂಡಗಳ ವಾಹನಕ್ಕೆ ಜಿ.ಪಿ.ಎಸ್ ಅಳವಡಿಸಿ ಅವರ ವಾಹನ ಚಲನೆಯ ಸ್ಥಳಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಿಂದ ನಿಗಾ ವಹಿಸಲಾಗುತ್ತಿದೆ. ಈ ವಾಹನಗಳು ಅರ್ಧ ಗಂಟೆಯಿಂದ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ನಿಂತರೆ ತಕ್ಷಣ ಕರೆ ಮಾಡಿ ಕಾರಣ ಕೇಳಿ ಮಾಹಿತಿ ಪಡೆದುಕೊಳ್ಳಿ, ಜೊತೆಗೆ ತಪಾಸಣೆ ಹೆ

ಹೊರ ಜಿಲ್ಲೆಯಿಂದ ಅಕ್ರಮವಾಗಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಚೆಕ್ಬಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಬೇಕು. ಜಿಲ್ಲೆಯ ಒಳಭಾಗದಲ್ಲಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಸ್ಥಳೀಯ ಪೊಲೀಸ್, ಎಫ್.ಎಸ್.ಟಿ, ತಂಡಗಳು ನಿಗಾ ವಹಿಸಬೇಕು ಸೂಚನೆ ನೀಡಿದರು.

ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು ಮೇಲ್ವಿಚರಣಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ವೆಚ್ಚವನ್ನು ಲೆಕ್ಕಕ್ಕೆ ಸೇರಿಸಿ ವರದಿ ನೀಡಬೇಕು. ಮತದಾನ ಪ್ರಾರಂಭವಾಗುವ 72 ಗಂಟೆಗಳ ಅವಧಿಯಲ್ಲಿ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ ಎಂದರು.

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ತಂಡಗಳು, ಚೆಕ್ ಪೋಸ್ಟ್, ವಶಪಡಿಸಿಕೊಂಡಿರುವ ನಗದು, ಮದ್ಯ ಹಾಗೂ ಇನ್ನಿತರೆ ವಸ್ತುಗಳ ಬಗ್ಗೆ ಜಿಲ್ಲಾಧಿಕಾರಿ ಡಾ: ಕುಮಾರ ಸಭೆಗೆ ಮಾಹಿತಿ ನೀಡಿದರು.

ಸಭೆಯ ನಂತರ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂ, ಮೀಡಿಯಾ ಮಾನಿಟರಿಂಗ್ ಸೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಚುನಾವಣಾ ವೆಚ್ಚ ವೀಕ್ಷಕರಾದ ರೋಹಿತ್ ಅಸುದಾನಿ, ಕುಮಾರ್ ಪ್ರಿಯತಮ್ ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

Tags:
error: Content is protected !!