Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮೈ-ಬೆಂ ಹೆದ್ದಾರಿಯಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಕಾರು

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲೆಕ್ಟ್ರಿಕ್‌ ಕಾರೊಂದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ದೇಗುಲದ ಮೇಲ್ಭಾಗದ ದಶಪಥ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸದ್ಯ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಚಲಿಸುತ್ತಿರುವಾಗ ಇದ್ದಕ್ಕಿದ್ದಂತೆ ಕಾರು ಉರಿದಿದ್ದು, ಉರಿದ ತೀವ್ರತೆಗೆ 1 ಕಿ.ಮೀ ದೂರದವರೆಗೂ ಹೊಗೆಯ ಛಾಯೆ ಗೋಚರಿಸಿದೆ.

ಅಗ್ನಿಶಾಮಕ ಸಿಬ್ಬಂದಿಗಳಿಂದ ಸ್ಥಳಕ್ಕೆ ಬರುವ ಹೊತ್ತಿಗೆ, ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು.

ಹೆದ್ದಾರಿಯಲ್ಲಿ ಕಾರು ಉರಿದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಈ ಘಟನೆ ಸಂಬಂಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!