Mysore
32
scattered clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸೂಪರ್ ಮಾರ್ಕೆಟ್ ಭಸ್ಮ

ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ.

ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ ಮಾರ್ಕೆಟ್ ಇದಾಗಿದೆ. ಶುಕ್ರವಾರ ಮುಂಜಾನೆ ಸೂಪರ್ ಮಾರ್ಕೆಟ್‌ನ ಫ್ರಿಡ್ಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಶ್ ಕೌಂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸಂಪೂರ್ಣವಾಗಿ ಸೂಪರ್ ಮಾರ್ಕೆಟ್‌ಗೆ ಬೆಂಕಿ ಆವರಿಸಿ ಇಡೀ ಸೂಪರ್ ಮಾರ್ಕೆಟ್ ಶೇ. 70ರಷ್ಟು ಸುಟ್ಟು ಕರಕಲಾಗಿದೆ.

ಸೂಪರ್ ಮಾರ್ಕೆಟ್‌ಗೆ ಬೆಂಕಿ ತಗುಲಿರುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಿ ಬಹುತೇಕ ಅಂಗಡಿ ಸುಟ್ಟುಕರಕಲಾಗಿತ್ತು.
ಘಟನೆಯಿಂದ ಕ್ಯಾಶ್ ಕೌಂಟರ್‌ನಲ್ಲಿದ್ದ 2 ಲಕ್ಷ ನಗದು ಹಾಗೂ ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಮಾಲೀಕ ಧನರಾಜ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Tags: