ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ.
ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ ಮಾರ್ಕೆಟ್ ಇದಾಗಿದೆ. ಶುಕ್ರವಾರ ಮುಂಜಾನೆ ಸೂಪರ್ ಮಾರ್ಕೆಟ್‌ನ ಫ್ರಿಡ್ಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಶ್ ಕೌಂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸಂಪೂರ್ಣವಾಗಿ ಸೂಪರ್ ಮಾರ್ಕೆಟ್‌ಗೆ ಬೆಂಕಿ ಆವರಿಸಿ ಇಡೀ ಸೂಪರ್ ಮಾರ್ಕೆಟ್ ಶೇ. 70ರಷ್ಟು ಸುಟ್ಟು ಕರಕಲಾಗಿದೆ.
ಸೂಪರ್ ಮಾರ್ಕೆಟ್‌ಗೆ ಬೆಂಕಿ ತಗುಲಿರುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಿ ಬಹುತೇಕ ಅಂಗಡಿ ಸುಟ್ಟುಕರಕಲಾಗಿತ್ತು.
ಘಟನೆಯಿಂದ ಕ್ಯಾಶ್ ಕೌಂಟರ್‌ನಲ್ಲಿದ್ದ 2 ಲಕ್ಷ ನಗದು ಹಾಗೂ ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಮಾಲೀಕ ಧನರಾಜ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…