Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮಳವಳ್ಳಿ| ವಿದ್ಯುತ್ ಸ್ಪರ್ಶಿಸಿ ಲೈನ್‌ಮೆನ್‌ ಧಾರುಣ ಸಾವು

ಮಳವಳ್ಳಿ: ವಿದ್ಯುತ್ ಕಂಬದಲ್ಲಿ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಲೈನ್ ಮೆನ್‌ಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಿವನಸಮುದ್ರ ಗ್ರಾಮದಲ್ಲಿ ನಡೆದಿದೆ.

ಹರ್ಷದ್ (28) ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದು, ಕಳೆದ 4 ವರ್ಷಗಳಿಂದ ಬೆಳಕವಾಡಿ ಶಾಖೆ ಕೆಇಬಿ ಕಚೇರಿಯಲ್ಲಿ ಲೈನ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಕಂಬದಲ್ಲಿ ನೇತಾಡುತ್ತಾ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!