Mysore
29
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ; ಅಮಾಯಕ ರೈತ ಸಾವು

ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ರೈತನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹರೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ರೈತ ಹರೀಶ್ ಅವರು ತಮ್ಮ ಜಮೀನಿನಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಅಸುನೀಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಬೆಳಿಗ್ಗೆ ಒಂದು ಗಂಟೆಗೆ ನೀಡಬೇಕಿದ್ದ ವಿದ್ಯುತನ್ನು 11:45ಕ್ಕೆ ನೀಡಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚೆಸ್ಕಾಂ ಕಚೇರಿ ಮುಂದೆಯೇ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!