ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ರೈತನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ರೈತ ಹರೀಶ್ ಅವರು ತಮ್ಮ ಜಮೀನಿನಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಅಸುನೀಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಬೆಳಿಗ್ಗೆ ಒಂದು ಗಂಟೆಗೆ ನೀಡಬೇಕಿದ್ದ ವಿದ್ಯುತನ್ನು 11:45ಕ್ಕೆ ನೀಡಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚೆಸ್ಕಾಂ ಕಚೇರಿ ಮುಂದೆಯೇ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…