ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿವೆ.
ನಿನ್ನೆಯಷ್ಟೇ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಈ ಆನೆಗಳು, ಇದೀಗ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಬೀಡು ಬಿಟ್ಟಿವೆ.
ರೈತರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ತೆಂಗು, ಅಡಿಕೆ, ಬಾಳೆ, ಭತ್ತ, ಕಬ್ಬು ಸೇರಿದಂತೆ ಅನೇಕ ಬೆಳೆಗಳನ್ನು ತುಳಿದು ನಾಶಪಡಿಸಿವೆ.
ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ರೈತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಇನ್ನು ಆನೆಗಳ ದಾಳಿಯಿಂದ ಅನ್ನದಾತರು ಕಂಗಾಲಾಗಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.