ಮಂಡ್ಯ

ಹಲಗೂರು | ವಿದ್ಯುತ್‌ ಸ್ಪರ್ಶಕ್ಕೆ ಗಂಡಾನೆ ಸಾವು

ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್‌ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮುಳ್ಳಯ್ಯನ ಕಟ್ಟೇಯ ಬಳಿ ಇರುವ ಎಚ್.ಸಿ.ರಮೇಶ್ ರೆಡ್ಡಿ ಅವರ ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಭಾನುವಾರ ತಡರಾತ್ರಿ ಮುತ್ತತ್ತಿ ಅರಣ್ಯ ಪ್ರದೇಶದಿಂದ ಸುಮಾರು 35 ರಿಂದ 40 ವರ್ಷದ ಗಂಡಾನೆ ಆಹಾರ ಆರಿಸಿಕೊಂಡ ಬಂದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು, ವಿದ್ಯುತ್ ಇಲಾಖೆ ಹಾಗೂ ಹಲಗೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಸೀಲನೆ ನಡಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

4 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

5 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

5 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

5 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

5 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

6 hours ago