ಮಂಡ್ಯ

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನೌಕರರ ಕುಂದು ಕೊರತೆಗಳ ಸಭೆ ಹಾಗೂ ಮಂಡ್ಯ ಜಿಲ್ಲೆಯ ಡಿ.ಡಿ.ಓ ಗಳಿಗೆ ಹಾಗೂ ಸಂಬಂಧಪಟ್ಟ ವಿಷಯ ನಿರ್ವಾಹಕರುಗಳಿಗೆ HRMS 2.0 ತಂತ್ರಾಂಶ ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ನಡೆಸಿದ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರಿಂದ ರಾಜ್ಯದಲ್ಲಿಯೇ ಅತಿ ಹೆಚ್ಚು ಸಮೀಕ್ಷೆ ಮಾಡಿದ ಜಿಲ್ಲೆ ಮಂಡ್ಯ ಎಂಬ ಹೆಗ್ಗಳಿಕೆ ಜಿಲ್ಲೆಗೆ ಬಂದಿತು ಎಂದರು.

ಸರ್ಕಾರದ ಯಾವುದೇ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಲಹೆ ಸೂಚನೆಗಳನ್ನು ನೀಡಬಹುದು ಆದರೆ ತಳಮಟ್ಟದ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರದ ವಿವಿಧ ಯೋಜನೆಗಳು ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಇದ್ದಾರೆ ಆರೋಗ್ಯ ಸಂಜೀವಿನಿ ಯೋಜನೆ ಅಡಿ ಬಾಕಿ ಇರುವ ಮೊತ್ತವನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಕ್ರಮ ವಹಿಸಲಾಗುವುದು. ಸಮೀಕ್ಷೆ ನಡೆಸಿದ ಎಲ್ಲಾ ಶಿಕ್ಷಕರಿಗೆ ಸರ್ಕಾರದಿಂದ ನೀಡಲಾಗುವ ಗೌರವ ಧನ ರೂ. 7.63 ಕೋಟಿ ಹಣ ಜಿಲ್ಲಾ ಖಜಾನೆಗೆ ಬಂದಿದೆ. ಸಮೀಕ್ಷೆ ನಡೆಸಿದ ಎಲ್ಲಾ ಶಿಕ್ಷಕರಿಗೂ ತಾಲೂಕುವಾರು ಹಣವನ್ನು ತಹಶೀಲ್ದಾರ್ ನೇತೃತ್ವದಲ್ಲಿ ನೀಡಲು ಸಮಯ ಹೆಚ್ಚಾಗುವುದರಿಂದ ಸ್ವತಂ ನಾನೇ 2500 ಕ್ಕೂ ಹೆಚ್ಚು ಸಹಿಗಳನ್ನು ಮಾಡಿ ಈವರೆಗೆ 7 ಕೋಟಿ ಗೌರವಧನವನ್ನು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ಶಿಕ್ಷಕರ ಖಾತೆಗೆ ವರ್ಗಾಯಿಸಲಾಗಿದೆ ಎಂದರು.

ತಾಂತ್ರಿಕ ದೋಷ ಉಂಟಾದ ಕಾರಣ ಉಳಿದ ರೂ.63 ಲಕ್ಷವನ್ನು ಪತಿಸಲು ಸಾಧ್ಯವಾಗಿಲ್ಲ ಒಂದು ವಾರದೊಳಗೆ ಸದರಿ ಮೊತ್ತವನ್ನು ಅರ್ಹರಿಗೆ ತಲುಪಿಸುವ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಸರ್ಕಾರಿ ನೌಕರರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಇದನ್ನೂ ಓದಿ:-ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಸರ್ಕಾರಿ ನೌಕರರು ಜವಾಬ್ದಾರಿಯನ್ನು ಅರಿತು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿ ಕಾರ್ಯನಿರ್ವಹಿಸಿ. ಕೆಲಸದಲ್ಲಿ ಬದ್ಧತೆ ಶಿಸ್ತು ಮತ್ತು ಆಸಕ್ತಿ ಅತಿ ಮುಖ್ಯ. ಮನೆಯಷ್ಟೇ ಕೆಲಸದ ಸ್ಥಳವು ಸಹ ಪವಿತ್ರ. ಸರ್ಕಾರಿ ಕೆಲಸ ಮಾಡಲು ದೇವರು ನಮಗೆಲ್ಲರಿಗೂ ಅವಕಾಶ ನೀಡಿದ್ದಾನೆ. ಮನಸ್ಸಾಕ್ಷಿ ಹಾಗೂ ಆತ್ಮ ಸಾಕ್ಷಿಯಿಂದ ಕರ್ತವ್ಯ ನಿರ್ವಹಿಸೋಣ. ಎಂದು ಕರೆ ನೀಡಿದರು.

ಪ್ರಸ್ತುತ ಜಿಲ್ಲೆಯಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯಡಿ ಮೂರು ಆಸ್ಪತ್ರೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈಗಾಗಲೇ ಜಿಲ್ಲೆಯಲ್ಲಿ 12 ಆಸ್ಪತ್ರೆಗಳನ್ನು ಆರೋಗ್ಯ ಸಂಜೀವಿನಿ ಯೋಜನೆಯಡಿ ತರಲು ಕ್ರಮ ವಹಿಸಲಾಗಿದೆ. ಸರ್ಕಾರಿ ನೌಕರರಿಗೆ ಸಂಬಳವನ್ನು ಸೂಕ್ತ ಕಾಲಮಿತಿಯೊಳಗೆ ನೀಡಲು ಡಿ ಡಿ ಓ ಗಳ ಮೇಲೆ ಜವಾಬ್ದಾರಿ ಹೆಚ್ಚಿದೆ. ಜಿಲ್ಲೆಯ ಎಲ್ಲಾ ಡಿಡಿಓಗಳು ತಮ್ಮ ಕರ್ತವ್ಯವನ್ನು ಅರಿತು ವ್ಯವಸ್ಥೆತವಾಗಿ ಹಣಕಾಸಿನ ಜವಾಬ್ದಾರಿಯನ್ನು ನಿಭಾಯಿಸಿ. ಎಚ್ ಆರ್ ಎಂ ಎಸ್ ತತ್ರಾಂಶ 2.0 ನಲ್ಲಿ ಇರುವ ನೂತನ ವಿಚಾರಗಳನ್ನು ತಿಳಿಯಿರಿ ಎಂದು ತಿಳಿಸಿದರು.

ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ಇಲಾಖೆಯ ಮುಖ್ಯಸ್ಥರು ಜವಾಬ್ದಾರಿಯನ್ನು ನೌಕರರಿಗೆ ಧನಾತ್ಮಕ ರೀತಿಯಲ್ಲಿ ಸ್ಪಂದಿಸಿ. ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ಅರಿವು ಮತ್ತು ಜ್ಞಾನ ಚೆನ್ನಾಗಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಾರ್ಯ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲೆಯಾದ್ಯಂತ ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ. ತಾಲೂಕು ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಇಲ್ಲಿ ಎಲ್ಲರೂ ಮುಖ್ಯರು, ಇಲಾಖೆಯ ಮುಖ್ಯಸ್ಥರು ಎಲ್ಲ ನೌಕರರನ್ನು ಉತ್ತಮವಾಗಿ ನಡೆಸಿಕೊಂಡು ಅವರಿಗೆ ಸ್ವಾತಂತ್ರ್ಯ ಗೌರವ ಮನ್ನಣೆಯನ್ನು ನೀಡಿ ಅವರ ಕಾರ್ಯಗಳನ್ನು ಗುರುತಿಸಿದರೆ ಅದರಿಂದ ನೌಕರರು ಉತ್ತೇಜನಗೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಈಗಾಗಲೇ ನಮ್ಮಲ್ಲಿ ವಾಟರ್ ಮ್ಯಾನ್, ಬಿಲ್ ಕಲೆಕ್ಟರ್ಗಳಿಗೆ ಇ ಎಫ್ ಐ, ಪಿಎಫ್ ಸೌಲಭ್ಯವನ್ನು ಕೊಡಿಸುವ ಕೆಲಸ ಮಾಡಲಾಗಿದೆ. ಎಲ್ಲ ಇಲಾಖೆಗಳಲ್ಲೂ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೂ ಸದರಿ ಸೌಲಭ್ಯವನ್ನು ಕಲ್ಪಿಸಿ. ಇಲಾಖಾ ವಿಚಾರಣಾ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸರ್ಕಾರಿಗೆ ನೌಕರರಿಗೆ ಸದರಿ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಸದರಿ ಕಾರ್ಯಕ್ರಮದ ಸ್ವರೂಪ ಯೋಗವನ್ನು ಪಡೆದುಕೊಳ್ಳಿ ಎಂದು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ನಾಗೇಶ್ ಮಾತನಾಡಿ, ಎಚ್ ಆರ್ ಎಂ ಎಸ್ ಮತ್ತು k2 ಕುರಿತಾಗಿ ಇರುವ ದೋಷಗಳನ್ನು ಪರಿಹಾರ ಮಾಡಿಕೊಡಿ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ತಿಂಗಳ ಮೊದಲ ದಿನವೇ ಸಂಬಳ ನೀಡಿ. ಆರೋಗ್ಯ ಸಂಜೀವಿನಿ ಅಡಿ ಜಿಲ್ಲೆಯಲ್ಲಿ ಬಾಕಿ ಇರುವ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ಇತರೆ ಮನವಿಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಪಾದ, ಸರ್ಕಾರಿ ನೌಕರರ ಗೌರವಾಧ್ಯಕ್ಷ ಶ್ರೀನಿವಾಸ್, ಸರ್ಕಾರಿ ನೌಕರರ ಹಿರಿಯ ಉಪಾಧ್ಯಕ್ಷ ಚಂದ್ರಶೇಖರ್, ಪಶು ಪಾಲನೆ ಇಲಾಖೆ ಉಪ ನಿರ್ದೇಶಕ ಶಿವಲಿಂಗಯ್ಯ ಸೇರಿದಂತೆ ಇನ್ನಿತರ ಗಣ್ಯರುಗಳು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

4 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

24 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

27 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

53 mins ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago