ಮಂಡ್ಯ

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಹೇಳಿದರು.

ಬೂದನೂರು ಉತ್ಸವ 2026ರ ಹಿನ್ನೆಲೆಯಲ್ಲಿ ಹೊಸ ಬೂದನೂರು ಗ್ರಾಮದ ಶ್ರೀ ಕಾಶಿ ವಿಶ್ವನಾಥ ಮತ್ತು ಅನಂತಪದ್ಮನಾಭ ಆವರಣದಲ್ಲಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೂದನೂರಿನಲ್ಲಿ 12ನೇ ಶತಮಾನದಲ್ಲಿ ಕಾಶಿನಾಥೇಶ್ವರ ದೇವಾಲಯ ನಿರ್ಮಾಣವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಜನರಿಗೆ ಪರಿಚಯಿಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಮತ್ತು ಬೋಧಕರ ಜೊತೆ ಸಮಾಲೋಚನೆ ನಡೆಸಿ ಮಕ್ಕಳಿಗೆ ಅರಿವು ಮತ್ತು ಜ್ಞಾನವನ್ನು ಬೆಳೆಸಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸುವಂತೆ ಆತ್ಮಸ್ಥೈರ್ಯ ತುಂಬಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್‌, ಜಿಲ್ಲಾಧಿಕಾರಿ ಡಾ.ಕುಮಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶೋಭಾ ರಾಣಿ, ಮನ್‌ ಮುಲ್‌ ಅಧ್ಯಕ್ಷ ಶಿವಕುಮಾರ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

2 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

4 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

4 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

5 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

10 hours ago