ಮಂಡ್ಯ : ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಾಣಿಕೆ ಕುರಿತು ರೈತರಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26ನೇ ಸಾಲಿನ ಕೇಂದ್ರ ಪುರಸ್ಕೃತ “ಪ್ರಧಾನಮಂತ್ರಿ ಮತ್ಸಸಂಪದ ಯೋಜನೆ” (P.M.M.S.Y)ಯನ್ನು ಅನುಷ್ಠಾನ ಮತ್ತು ಮೇಲುಸ್ತುವಾರಿ ನಡೆಸಲು ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ 177 ಕೆರೆಗಳು ಇದೆ ಎಂದು ಹೇಳಿದರು.
ಈಗಾಗಲೇ ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯ ಹಲವು ಕೆರೆಗಳಿಗೆ ಟೆಂಡರ್ ಕರೆಯಲಾಗಿದೆ. ಜಿಲ್ಲೆಯಲ್ಲಿ 2021 ನೇ ಸಾಲಿನಿಂದ 25 ನೇ ಸಾಲಿನ ವರೆಗೂ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 742 ಫಲಾನುಭವಿಗಳಿದ್ದಾರೆ. ಇಲ್ಲಿಯವರೆಗೂ 124 ಫಲಾನುಭವಿಗಳಿಗೆ 513.38 ಲಕ್ಷ ಸಹಾಯಧನ ನೀಡಲಾಗಿದೆ ಎಂದರು.
ಮೀನುಗಾರಿಕೆ ಇಲಾಖೆಯಿಂದ 1 ಹೆಕ್ಟೇರ್ ಪ್ರದೇಶದಲ್ಲಿ ಮೀನು ಸಾಕಾಣಿಕೆಗೆ ಮಾಡಲು 7 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಶೇ 60 ರಷ್ಟು ಸಬ್ಸಿಡಿ ಹಾಗೂ ಸಾಮಾನ್ಯ ವರ್ಗಗಳಿಗೆ ಶೇ 40 ರಷ್ಟು ಸಬ್ಸಿಡಿ ನೀಡಲಾಗುತ್ತದೆ ಎಂದು ತಿಳಿಸಿದರು.
ಮೀನುಗಾರಿಕೆ ಇಲಾಖೆಯಿಂದ ಸೌಲಭ್ಯ ಪಡೆದು ಮೀನುಗಾರಿಕೆಯಲ್ಲಿ ಯಶಸ್ಸು ಗಳಿಸಿದವರ ಯಶೋಗಾಥೆಯನ್ನು ಸಿದ್ಧಪಡಿಸಿ. ಹಿಂದೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸೌಲಭ್ಯ ಪಡೆದ ಅರ್ಹ ಫಲಾನುಭವಿಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರ ಎಂಬುದನ್ನು ಪರಿಶೀಲಿಸಿ ಎಂದು ಹೇಳಿದರು.
ಮೀನುಗಾರಿಕೆ ಮಾಡಲು ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ಮೀನುಗಾರಿಕೆ ಕುರಿತು ಸೂಕ್ತ ತರಬೇತಿ ನೀಡಿ. ಮೀನುಗಾರರು ಹಾಗೂ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕಬೇಕು. ಜಿಲ್ಲೆಯಲ್ಲಿ ಪ್ರತಿ ವರ್ಷ ಸರಾಸರಿ 30 ಸಾವಿರಕ್ಕೂ ಹೆಚ್ಚು ಟನ್ ಮೀನು ಉತ್ಪಾದನೆ ಆಗುತ್ತಿದೆ. ಕರಾವಳಿ ಹೊರತುಪಡಿಸಿ ಮೀನುಗಾರಿಕೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಹತ್ತನೆ ಸ್ಥಾನದೊಳಗಿದೆ ಎಂದು ಹೇಳಿದರು.
ಮೀನುಗಾರಿಕೆ ಮಾಡಲು ವರ್ಷ ಪೂರ್ತಿ ನೀರು ಅಗತ್ಯ ಹಾಗಾಗಿ ಜಿಲ್ಲೆಯ ವರ್ಷ ಪೂರ್ತಿ ನೀರಿನ ಲಭ್ಯತೆ ಇರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಮೀನುಗಾರಿಕೆ ಪ್ರೋತ್ಸಾಹ ನೀಡಿ. ಜಿಲ್ಲೆಯಲ್ಲಿ ಬೇಡಿಕೆ ಇರುವ ಮೀನಿನ ತಳಿಯನ್ನು ಅಭಿವೃದ್ಧಿಪಡಿಸಿ, ಸದರಿ ವರ್ಷ ಅರ್ಹ ಮೀನುಗಾರರಿಗೆ ಉತ್ತೇಜನ ನೀಡಲು ನೀಡಿದ ಮತ್ಸ್ಯ ವಾಹನಗಳು ಉತ್ತಮ ಲಾಭ ಗಳಿಸುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಾಬಾ ಸಾಬ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಗಳಾದ ಲೋಕೇಶ್, ಪೂಜಾಶ್ರೀ, ಪುಷ್ಪಲತಾ, ಜಗದೀಶ್ ಟಿ.ಡಿ, ಮಹದೇವಸ್ವಾಮಿ, ವಿ.ಸಿ ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಕಮಲಾಬಾಯಿ ಕೂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…