ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗಮಂಗಲ ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸಿ ಎಂದು ಹೇಳಿದರು.
ಮಳವಳ್ಳಿ ತಾಲ್ಲೂಕಿನಲ್ಲಿ 563 ಎಕರೆ ಜಾಗವನ್ನು ಕೆಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಗುರುತಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕಾ ವಸಾಹತುಗಳು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.





