ಮಂಡ್ಯ: ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಜ್ಞಾನೇಶ್(30) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಎಂಜಿನಿಯರ್ ಆಗಿದ್ದಾರೆ.
ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಜ್ಞಾನೇಶ್ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.